Featured

ಯೂರೋ ಕಪ್ ಫುಟ್ಬಾಲ್: ಇಂಗ್ಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಇಟಲಿ -Vishwanews24

ಯೂರೋ ಕಪ್ ಫುಟ್ಬಾಲ್: ಇಂಗ್ಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಇಟಲಿ -Vishwanews24

ಲಂಡನ್: ಇಂಗ್ಲೆಂಡ್ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 3-2 ಗೋಲುಗಳಿಂದ ಸೋಲಿಸಿದ ಬಲಿಷ್ಠ ಇಟಲಿ ಯೂರೋ ಕಪ್ ಫುಟ್ಬಾಲ್ ಟೂರ್ನಿಯ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ವೆಂಬ್ಲೆಯಲ್ಲಿ ಸೋಮವಾರ ನಡೆದ ರೋಚಕ ಪಂದ್ಯ 1-1 ಗೋಲುಗಳಿಂದ ಡ್ರಾ ಆದ ಬಳಿಕ ಪೆನಾಲ್ಟಿ ಶೂಟೌಟ್‌ಗೆ ಮೊರೆ ಹೋಗಬೇಕಾಯಿತು. ಪೆನಾಲ್ಟಿ ಶೂಟೌಟ್‌ನಲ್ಲಿ 3-2 ಗೋಲುಗಳ ಅಂತರದಿಂದ ಇಟಲಿ ತಂಡವು ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ 1968ರ ನಂತರ ಮೊದಲ ಬಾರಿಗೆ ಯುರೋಪಿಯನ್ ಚಾಂಪಿಯನ್‌ಶಿಪ್ ಅನ್ನು ಗೆದ್ದುಕೊಂಡಿತು.

ಪಂದ್ಯ ಆರಂಭವಾಗಿ ಎರಡನೇ ನಿಮಿಷದಲ್ಲೇ ಇಂಗ್ಲೆಂಡ್ ತಂಡ ಗೋಲು ಗಳಿಸಿತ್ತು. ಲ್ಯೂಕ್ ಶಾ ಭರ್ಜರಿ ಗೋಲಿನೊಂದಿಗೆ ಇಂಗ್ಲೆಂಡ್‌ ತಂಡಕ್ಕೆ ಕನಸಿನ ಆರಂಭವನ್ನು ನೀಡಿದ್ದರು. ಬಳಿಕ 67 ನಿಮಿಷದಲ್ಲಿ ಇಟಲಿಯ ಲಿಯೊನಾರ್ಡೊ ಬೊನುಸಿ ಗೋಲು ಗಳಿಸುವ ಮೂಲಕ ಪಂದ್ಯ 1-1 ಗೋಲುಗಳಿಂದ ಡ್ರಾ ಆಯಿತು.

ಬಳಿಕ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ 3-2 ಗೋಲುಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಇಟಲಿ ತಂಡ ಯುರೋಪಿಯನ್ ಚಾಂಪಿಯನ್‌ಶಿಪ್ ಅನ್ನು ಗೆದ್ದುಕೊಂಡಿತು. ಈ ಮೂಲಕ ಮೊದಲ ಬಾರಿ ಯುರೋಪಿಯನ್ ಚಾಂಪಿಯನ್‌ಶಿಪ್ ಟ್ರೋಫಿ ಗೆಲ್ಲುವ ಇಂಗ್ಲೆಂಡ್ ಕನಸು ಭಗ್ನವಾಯಿತು.

2006ರ ಫಿಫಾ ವಿಶ್ವಕಪ್ ಗೆಲುವಿನ ನಂತರ ಇಟಲಿ ಗೆದ್ದ ಮೊದಲ ಪ್ರಮುಖ ಅಂತರರಾಷ್ಟ್ರೀಯ ಟ್ರೋಫಿ ಇದಾಗಿದೆ. ಇಟಲಿ ಯುರೋ 2000 ಮತ್ತು ಯುರೋ 2012 ರಲ್ಲಿ ಫೈನಲ್ ತಲುಪಿತ್ತು. ಆದರೆ ಕ್ರಮವಾಗಿ ಫ್ರಾನ್ಸ್ ಮತ್ತು ಸ್ಪೇನ್ ವಿರುದ್ಧ ಸೋತಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago