ಲಂಡನ್: ಇಂಗ್ಲೆಂಡ್ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 3-2 ಗೋಲುಗಳಿಂದ ಸೋಲಿಸಿದ ಬಲಿಷ್ಠ ಇಟಲಿ ಯೂರೋ ಕಪ್ ಫುಟ್ಬಾಲ್ ಟೂರ್ನಿಯ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ವೆಂಬ್ಲೆಯಲ್ಲಿ ಸೋಮವಾರ ನಡೆದ ರೋಚಕ ಪಂದ್ಯ 1-1 ಗೋಲುಗಳಿಂದ ಡ್ರಾ ಆದ ಬಳಿಕ ಪೆನಾಲ್ಟಿ ಶೂಟೌಟ್‌ಗೆ ಮೊರೆ ಹೋಗಬೇಕಾಯಿತು. ಪೆನಾಲ್ಟಿ ಶೂಟೌಟ್‌ನಲ್ಲಿ 3-2 ಗೋಲುಗಳ ಅಂತರದಿಂದ ಇಟಲಿ ತಂಡವು ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ 1968ರ ನಂತರ ಮೊದಲ ಬಾರಿಗೆ ಯುರೋಪಿಯನ್ ಚಾಂಪಿಯನ್‌ಶಿಪ್ ಅನ್ನು ಗೆದ್ದುಕೊಂಡಿತು.
ಪಂದ್ಯ ಆರಂಭವಾಗಿ ಎರಡನೇ ನಿಮಿಷದಲ್ಲೇ ಇಂಗ್ಲೆಂಡ್ ತಂಡ ಗೋಲು ಗಳಿಸಿತ್ತು. ಲ್ಯೂಕ್ ಶಾ ಭರ್ಜರಿ ಗೋಲಿನೊಂದಿಗೆ ಇಂಗ್ಲೆಂಡ್ ತಂಡಕ್ಕೆ ಕನಸಿನ ಆರಂಭವನ್ನು ನೀಡಿದ್ದರು. ಬಳಿಕ 67 ನಿಮಿಷದಲ್ಲಿ ಇಟಲಿಯ ಲಿಯೊನಾರ್ಡೊ ಬೊನುಸಿ ಗೋಲು ಗಳಿಸುವ ಮೂಲಕ ಪಂದ್ಯ 1-1 ಗೋಲುಗಳಿಂದ ಡ್ರಾ ಆಯಿತು.
ಬಳಿಕ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ 3-2 ಗೋಲುಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಇಟಲಿ ತಂಡ ಯುರೋಪಿಯನ್ ಚಾಂಪಿಯನ್‌ಶಿಪ್ ಅನ್ನು ಗೆದ್ದುಕೊಂಡಿತು. ಈ ಮೂಲಕ ಮೊದಲ ಬಾರಿ ಯುರೋಪಿಯನ್ ಚಾಂಪಿಯನ್‌ಶಿಪ್ ಟ್ರೋಫಿ ಗೆಲ್ಲುವ ಇಂಗ್ಲೆಂಡ್ ಕನಸು ಭಗ್ನವಾಯಿತು.
2006ರ ಫಿಫಾ ವಿಶ್ವಕಪ್ ಗೆಲುವಿನ ನಂತರ ಇಟಲಿ ಗೆದ್ದ ಮೊದಲ ಪ್ರಮುಖ ಅಂತರರಾಷ್ಟ್ರೀಯ ಟ್ರೋಫಿ ಇದಾಗಿದೆ. ಇಟಲಿ ಯುರೋ 2000 ಮತ್ತು ಯುರೋ 2012 ರಲ್ಲಿ ಫೈನಲ್ ತಲುಪಿತ್ತು. ಆದರೆ ಕ್ರಮವಾಗಿ ಫ್ರಾನ್ಸ್ ಮತ್ತು ಸ್ಪೇನ್ ವಿರುದ್ಧ ಸೋತಿತ್ತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…