ಯೇಸು ಪ್ರತಿಮೆ : ಕಲ್ಲಡ್ಕ ಪ್ರಭಾಕರ್ ಭಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯವರ ನೆಮ್ಮದಿ ಹಾಳು ಮಾಡಿದವರು : ಯು.ಟಿ ಖಾದರ್ -Vishwanews24

ಮಂಗಳೂರು: ಏಸು ಪ್ರತಿಮೆ ವಿರೋಧಿಸಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕನಕಪುರದಲ್ಲಿ ಚಲೋ ಹಮ್ಮಿಕೊಂಡಿರುವುದು ಅವರ ಸಣ್ಣ ಮನಸ್ಸನ್ನು ತೋರಿಸುತ್ತದೆ. ದೇವರ ಪ್ರತಿಮೆ ಮಾಡಲು ಅಡ್ಡಿ ಮಾಡುವ ಇವರ ಮನೋಭಾವಕ್ಕೆ ಏನು ಹೇಳಬೇಕು ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ಬೇಸರ ಮಾಡಿಕೊಂಡಿದ್ದಾರೆ.

ಶಾಂತಿ ಸಂದೇಶ ಸಾರಲು ಕನಕಪುರ ತಾಲೂಕಿನ ಹಾರೋಹಳ್ಳಿಯ ಕಪಾಲಿಬೆಟ್ದಲ್ಲಿ ಏಸು ಪ್ರತಿಮೆ ನಿರ್ಮಿಸಲಾಗುತ್ತಿದೆ. ಕ್ರೈಸ್ತ ಸಮುದಾಯವರ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು ಸಮಾಜಕ್ಕೆ ಪೂರಕವಾಗಿದೆ. ಕ್ರೈಸ್ತ ಸಮುದಾಯವರು ಯಾವುದನ್ನೂ ಮಿಸ್ ಯೂಸ್ ಮಾಡೋದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ದೇಶಭಕ್ತಿ ಎಂದು ಹೇಳುವವರು ನಿರ್ಗತಿಕರನ್ನು ನೋಡೋದಿಲ್ಲ. ಕಲ್ಲಡ್ಕ ಪ್ರಭಾಕರ್ ಭಟ್ ಅಲ್ಲಿನ ಸೋದರತೆ ಹಾಳು ಮಾಡುವ ಉದ್ದೇಶದಿಂದ ಹೋಗಿದ್ದಾರೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಣ ಮಾಡುವ ಅಗತ್ಯತೆ ಏನಿತ್ತು? ಅವರು ದಕ್ಷಿಣ ಕನ್ನಡ ಜಿಲ್ಲೆಯವರ ನೆಮ್ಮದಿ ಹಾಳು ಮಾಡಿದವರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನಕಪುರ ಹಾಗೂ ಬೆಂಗಳೂರಿನವರಾದರೂ ಶಾಂತಿಯಿಂದ ನೆಮ್ಮದಿಯಿಂದ ಇರಲಿ. ಇಲ್ಲಿ ನಾವು ನರಕ ಅನುಭವಿಸುತ್ತಿರೋದೇ ಸಾಕು  ಎಂದು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಮಾಜಿ ಸಚಿವ ಯುಟಿ ಖಾದರ್ ವಾಗ್ದಾಳಿ ನಡೆಸಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago