ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆಯಾಗಿದೆ. ಈ ವಿಚಾರವಾಗಿ ವೀರಾಪೂರ ಓಣಿಯ ಕಾಂಗ್ರೆಸ್ ಕಾರ್ಪೊರೇಟರ್ ಹಾಗೂ ನೇಹಾ ಹಿರೇಮಠ್ ತಂದೆ ನಿರಂಜನ ಹಿರೇಮಠ ಹುಬ್ಬಳ್ಳಿ ಪೊಲೀಸರು ಹಾಗೂ ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.
ನನ್ನ ವಾರ್ಡ್‌ನಲ್ಲಿ ಇಂತಹ ಘಟನೆಯಾಗಿರುವುದನ್ನ ನಾನು ಖಂಡಿಸುತ್ತೇನೆ. ನನ್ನ ಪುತ್ರಿಯ ನೇಹಾ ಹತ್ಯೆ ನಡೆದು ಇನ್ನೂ ಒಂದು ತಿಂಗಳು ಕಳೆದಿಲ್ಲ. ಈ ರೀತಿ ಘಟನೆ ಮತ್ತೆ ಮರುಕಳಿಸಿದೆ. ನನ್ನ ಪುತ್ರಿ ಹತ್ಯೆಯಾದಾಗಲೇ ಈ ರೀತಿಯ ಮತ್ತೊಂದು ಘಟನೆಯಾಗಬಾರದು ಅಂತ ಹೇಳಿದ್ದೆ. ಆದರೂ ಇಂತಹ ಘಟನೆ ನಡೆದಿದೆ ಇದಕ್ಕೆ ಇಲ್ಲಿನ ಪೊಲೀಸ್ ಕಮೀಷನರ್ ಅವರೇ ಕಾರಣ. ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಎಲ್ಲಾ ಕಡೆ ಯುವಕರು ಡ್ರಗ್ಸ್ ಹಾವಳಿಗೆ ದಾರಿ ತಪ್ಪುತ್ತಿದ್ದಾರೆ. ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್ ಮಾದರಿಯಲ್ಲೇ ಎನ್‌ಕೌಂಟರ್ ಆಗಬೇಕು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ನಮ್ಮ ರಾಜ್ಯಕ್ಕೂ ಬೇಕಿದೆ ಎಂದು ಹೇಳಿದ್ದಾರೆ.
ಇಲ್ಲಿನ ಪೊಲೀಸ್ ಆಯುಕ್ತರು ಸರಿಯಾದ ಯಾವ ಕ್ರಮವನು ಕೈಗೊಳ್ಳುತ್ತಿಲ್ಲ. ಸರಿಯಾಗಿ ಕೆಲಸ ಮಾಡಲು ಇಷ್ಟ ಇಲ್ಲದಿದ್ದರೇ ರಾಜೀನಾಮೆ ಕೊಟ್ಟು ಹೋಗಲಿ. ಅಂಜಲಿ ಕೂಡ ನನ್ನ ಮಗಳಿದ್ದಂತೆ. ನನ್ನ ಪುತ್ರಿ ನೇಹಾಳ ಹತ್ಯೆ ವಿಚಾರವಾಗಿ ಯಾವ ರೀತಿ ಹೋರಾಟ ನಡೆದಿತ್ತು ಅದೇ ರೀತಿ ಇವಳ ಹತ್ಯೆಯನ್ನ ಖಂಡಿಸಬೇಕು ಎಂದು ನಿರಂಜನ ಹಿರೇಮಠ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…