ಹೊಸನಗರ : ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಂದೊಂದು ದಿನ ದೇಶದ ಪ್ರಧಾನಿ ಆಗಲಿದ್ದಾರೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ.
ಯೋಗಿ ಆದಿತ್ಯನಾಥ್ ಪ್ರಭಾವಿ ರಾಜಕಾರಣಿ ಆಗಿರುವುದಷ್ಟೇ ಅಲ್ಲ, ಸಂತ ಕುಲಕ್ಕೆ ಭೂಷಣ ಎನಿಸಿದ್ದಾರೆ. ಅವರು ಮುಂದೊಂದು ದಿನ ದೇಶದ ಪ್ರಧಾನಿ ಆಗುವುದರಲ್ಲಿ ಸಂಶಯವಿಲ್ಲ. ಆ ಸಾಮರ್ಥ್ಯ ಅವರಲ್ಲಿದೆ. ಅವರ ನೇರ, ನಿಷ್ಠುರ ರಾಜಕಾರಣ ಇತರರಿಗೆ ಮಾದರಿಯಾಗಿದೆ ಎಂದರು.
ಇನ್ನು ಗೋವುಗಳ ರಕ್ಷಣೆಗೆ ಗೋಹತ್ಯಾ ನಿಷೇಧ ಕಾಯಿದೆ ಜಾರಿಗೊಳಿಸಿರುವ ಸರಕಾರದ ಕ್ರಮ ಪ್ರಶಂಸನೀಯ ಎಂದರು.
ಆದರೆ ಕಾಯಿದೆ ಇನ್ನಷ್ಟುಕಟ್ಟುನಿಟ್ಟಾಗಿ ಜಾರಿಯಾಗಬೇಕು. ಎಲ್ಲವೂ ಕಾನೂನಿನಿಂದ ಮಾತ್ರವೇ ಆಗಲು ಸಾಧ್ಯವಿಲ್ಲ. ಗೋ ಮಾತೆಯ ರಕ್ಷಣೆಗೆ ಎಲ್ಲರೂ ಸಿದ್ಧರಾಗಬೇಕು. ಈ ನಿಟ್ಟಿನಲ್ಲಿ ರಾಮಚಂದ್ರಾಪುರ ಮಠವು ಗೋವುಗಳ ರಕ್ಷಣೆಗೆ ಹಿಂದಿನಿಂದಲೂ ಬದ್ಧವಾಗಿದೆ ಎಂದು ಅವರು ಹೇಳಿದರು.
ಉತ್ತರ ಪ್ರದೇಶ ಚುನಾವಣೆಯಲ್ಲಿಸ್ಪಷ್ಟಬಹುಮತದೊಂದಿಗೆ ಜಯ ಸಾಧಿಸಿರುವ ಬಿಜೆಪಿ, ರಾಜ್ಯದಲ್ಲಿ ನೂತನ ಸರ್ಕಾರವನ್ನು ಮಾ.18ರ ಹೋಳಿ ಹುಣ್ಣಿಮೆಗೂ ಮೊದಲೇ ರಚಿಸುವ ಸಾಧ್ಯತೆ ಇದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ , ಬಿಜೆಪಿ ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸದ್ಯದ ಲೆಕ್ಕಾಚಾರದ ಪ್ರಕಾರ ಮಾ.14 ಅಥವಾ 15ರಂದು ಲಖನೌದಲ್ಲಿ ದಾಖಲೆಯ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…
ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ…