ಲಕ್ನೋ: ಕೇಸರಿ.. ಕೇಸರಿ.. ಕೇಸರಿ… ಅದೊಂದು ರಾಜ್ಯದಲ್ಲಿ ಎಲ್ಲೆಲ್ಲೂ ಕೇಸರಿ. ಉತ್ತರ ಪ್ರದೇಶದಲ್ಲಿ ಸರ್ಕಾರಿ ಕಟ್ಟಡಗಳು, ನಾಯಕರ ಪ್ರತಿಮೆಗಳು ಎಲ್ಲವೂ ಕೇಸರಿಮಯವಾಗ್ತಿವೆ. ಅದ್ರಲ್ಲೂ ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನೂ ಕೇಸರಿ ಮಯವಾಗಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಮತ್ತೆ ಬಾಬಾ ಸಾಹೇಬರ ಪುತ್ಥಳಿಯ ಬಣ್ಣವನ್ನ ಬದಲಿಸಿ ವಿವಾದಕ್ಕೆ ಫುಲ್ಸ್ಟಾಪ್ ಇಟ್ಟಿದ್ದರು. ಇದೀಗ ಮತ್ತೆ ಕೇಸರಿ ವಿವಾದ ಹುಟ್ಟಿಕೊಂಡಿದೆ.
ಎರಡು ದಿನಗಳ ಹಿಂದಷ್ಟೇ ಸಿಎಂ ಹೋಗಿ ಆದಿತ್ಯನಾಥ್, ದೀನ್ ದಯಾಳ್ ಉಪಾಧ್ಯಾಯ ರೇಲ್ವೆ ನಿಲ್ದಾಣಕ್ಕೆ ಕೇಸರಿ ಬಣ್ಣ ಬಳಿಯುವಂತೆ ಆದೇಶಿಸಿದ್ದರು. ಇದರ ಬೆನ್ನಲ್ಲೇ ಈಗ ಮಹಾತ್ಮ ಗಾಂಧಿ ಪ್ರತಿಮೆಗೂ ಕೇಸರಿ ಬಣ್ಣ ಬಳಿಯಲಾಗಿದೆ. ಶಹಜನ್ಪುರ ಜಿಲ್ಲೆಯ ಢಾಕಾ ಗಂಶ್ಯಾಂಪುರದಲ್ಲಿರುವ ಗಾಂಧಿ ಪ್ರತಿಮೆಗೆ ಸರ್ಕಾರದ ಆದೇಶವೇ ಇಲ್ಲದಿದ್ರೂ ಕೇಸರಿ ಬಣ್ಣ ಬಳಿಯಲಾಗಿದೆ.
ಇಲ್ಲಿನ ಸರ್ಕಾರಿ ಶಾಲೆ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಕೇಸರಿ ಬಣ್ಣ ಬಳಿದಿದ್ದಾರೆ. ಇದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಇದು ಬಿಜೆಪಿ ಕಾರ್ಯಕರ್ತರ ಕೃತ್ಯ ಅಂತ ಕಾಂಗ್ರೆಸ್ ಆರೋಪಿಸಿದೆ. ಇನ್ನು, ಈ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ ತನಿಖೆಗೆ ಆದೇಶಿಸಿದ್ದು, ಉಪವಿಭಾಗದ ಮ್ಯಾಜಿಸ್ಟ್ರೇಟ್ ಇದರ ನೇತೃತ್ವ ವಹಿಸುವಂತೆ ಸೂಚಿಸಿದೆ.
ಆದ್ರೆ, ಜಿಲ್ಲಾಡಳಿತ ಮಾತ್ರ ಇದು ಕೇಸರಿ ಬಣ್ಣವಲ್ಲ, ತೆಳು ಹಳದಿ ಬಣ್ಣ ಅಂತ ಹೇಳಿದೆ. ಎರಡು ವರ್ಷಗಳ ಹಿಂದೆ ಶಾಲೆಯ ಮುಖ್ಯೋಪಾಧ್ಯಾಯರು ಪ್ರತಿಮೆಯ ದುರಸ್ಥಿ ಹಾಗೂ ಬಣ್ಣ ಬಳಿಯುವುದಕ್ಕೆ ಆದೇಶಿಸಿದ್ದರು. ಆಗ ಅದಕ್ಕೆ ತೆಳು ಹಳದಿ ಬಣ್ಣ ಹಚ್ಚಲಾಗಿತ್ತು ಅಂತ ಹೇಳಿದೆ. ಆದ್ರೆ ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ಎರಡು ವರ್ಷಗಳ ಹಿಂದೆಯೇ ನಡೆದಿದ್ದ ಘಟನೆಯಾಗಿದ್ರೆ ಈ ಮೊದಲೇ ಇದು ಬೆಳಕಿಗೆ ಬರಬೇಕಿತ್ತಲ್ಲಾ ಅಂತ ಪ್ರಶ್ನಿಸಿದೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…