ಬೆಂಗಳೂರು : ಕನ್ನಡದ ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಅವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.
ಯಶವಂತ ಸರದೇಶಪಾಂಡೆ ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ಖ್ಯಾತ ಕನ್ನಡ ರಂಗಭೂಮಿ ನಟ, ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಅತ್ಯಂತ ಜನಪ್ರೀಯ ನಾಟಕಕಾರರಾಗಿದ್ದ ನಮ್ಮ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಇವರು ಪಾತ್ರವಹಿಸುತ್ತಿದ್ದರು’ ಎಂದು ಅವರು ಬರೆದುಕೊಂಡಿದ್ದಾರೆ.
ಯಶವಂತ ಅವರು ನಾಟಕಗಳನ್ನು ನಿರ್ದೇಶಿಸಿ, ಅವುಗಳಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು. ಅವರು ಮುಖ್ಯವಾಗಿ ಹಾಸ್ಯ ನಾಟಕಗಳಲ್ಲಿ ನಟಿಸುತ್ತಿದ್ದರು. ಕರ್ನಾಟಕ ಮಾತ್ರವಲ್ಲದೆ, ದೇಶ-ವಿದೇಶಗಳಲ್ಲಿಯೂ ನಾಟಕಗಳನ್ನು ಮಾಡಿದ್ದರು. ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ಯಶವಂತ ಅವರು ನಾಟಕಗಳಲ್ಲಿ ಮಾತ್ರವಲ್ಲದೆ ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲೂ ನಟಿಸಿದ್ದರು. ಅಲ್ಲಿಯೂ ಹಾಸ್ಯ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದರು.
ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…
ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…
ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…
ಮಣಿಪಾಲದಲ್ಲಿ ಬೈಕ್ ಕಳ್ಳತನ ಪ್ರಕರಣ: ಆರೋಪಿ ಬಂಧನ, ದ್ವಿಚಕ್ರ ವಾಹನ ವಶಕ್ಕೆ ಉಡುಪಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ…
ಮಂಗಳೂರು : ಬೋಲಾಸ್ ಘಟಕಕ್ಕೆ ಆರೋಗ್ಯ ಇಲಾಖೆ ದಾಳಿ ; 1,240 ಕೆ.ಜಿ. ನಕಲಿ ಅಡುಗೆ ಎಣ್ಣೆ ಜಪ್ತಿ ಮಂಗಳೂರು…
ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಕಾಮಗಾರಿ ಹಿನ್ನಲೆ - ಪ್ರಮುಖ ರೈಲುಗಳ ಸಮಯ ಬದಲಾವಣೆ ಬೆಂಗಳೂರು:ರೈಲ್ವೆ ಕಾಮಗಾರಿ ಹಿನ್ನೆಲೆ ನೈರುತ್ಯ…