Featured

ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ – vishwanews24

ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ

ಬೆಂಗಳೂರು : ಕನ್ನಡದ ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಅವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಯಶವಂತ ಸರದೇಶಪಾಂಡೆ ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ಖ್ಯಾತ ಕನ್ನಡ ರಂಗಭೂಮಿ ನಟ, ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಅತ್ಯಂತ ಜನಪ್ರೀಯ ನಾಟಕಕಾರರಾಗಿದ್ದ ನಮ್ಮ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಇವರು ಪಾತ್ರವಹಿಸುತ್ತಿದ್ದರು’ ಎಂದು ಅವರು ಬರೆದುಕೊಂಡಿದ್ದಾರೆ.

ಯಶವಂತ ಅವರು ನಾಟಕಗಳನ್ನು ನಿರ್ದೇಶಿಸಿ, ಅವುಗಳಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು. ಅವರು ಮುಖ್ಯವಾಗಿ ಹಾಸ್ಯ ನಾಟಕಗಳಲ್ಲಿ ನಟಿಸುತ್ತಿದ್ದರು. ಕರ್ನಾಟಕ ಮಾತ್ರವಲ್ಲದೆ, ದೇಶ-ವಿದೇಶಗಳಲ್ಲಿಯೂ ನಾಟಕಗಳನ್ನು ಮಾಡಿದ್ದರು. ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ಯಶವಂತ ಅವರು ನಾಟಕಗಳಲ್ಲಿ ಮಾತ್ರವಲ್ಲದೆ ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲೂ ನಟಿಸಿದ್ದರು. ಅಲ್ಲಿಯೂ ಹಾಸ್ಯ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

4 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

5 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

5 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

5 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

5 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

6 hours ago