ಶಿವಮೊಗ್ಗ : ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಬಂಡಾಯದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಇದರ ನಡುವೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸುವ ವಿಚಾರವಾಗಿ ಫೈಟ್ ಶುರುವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಕೆಎಸ್ ಈಶ್ವರಪ್ಪ ಅವರು ನರೇಂದ್ರ ಮೋದಿ ಭಾವಚಿತ್ರವನ್ನು ಪ್ರಚಾರದ ವೇಳೆ ಬಳಸಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಶಿವಮೊಗ್ಗದ ಕೋರ್ಟ್‌ನಲ್ಲಿ ಕೆವಿಯಟ್ ಅರ್ಜಿ ಸಲ್ಲಿಸಿರುವ ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆಗೆ ಅನುಮತಿ ಕೇಳಿದ್ದಾರೆ. ಕೆಎಸ್ ಈಶ್ವರಪ್ಪ ಅವರು ತಮ್ಮ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಬಳಸುತ್ತಿದ್ದಾರೆ. ಇದಕ್ಕೆ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಕೆಎಸ್ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ? ಮೋದಿ ಭಾವಚಿತ್ರವನ್ನು ಯಾರಾದರೂ ಬಳಸಬಹುದು ಎಂದು ಹೇಳಿದ್ದರು.
ಇದರ ಬೆನ್ನಲ್ಲಿಯೇ ಎಚ್ಚರಿಕೆ ಹೆಜ್ಜೆಯಿಟ್ಟಿರುವ ಕೆಎಸ್ ಈಶ್ವರಪ್ಪ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೊರೆ ಹೋಗಿದ್ದು, ಶುಕ್ರವಾರ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಬಿಜೆಪಿ ಟಿಕೆಟ್ ನೀಡದ್ದರಿಂದ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಪ್ರಚಾರದಲ್ಲಿ ಬಿಜೆಪಿ ಚಿಹ್ನೆ ಹೊರತುಪಡಿಸಿ ಮೋದಿ ಭಾವಚಿತ್ರವನ್ನು ಈಶ್ವರಪ್ಪ ಬಳಸುತ್ತಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…