ಚಿಕ್ಕಮಗಳೂರು: ವಿನಯ್ ಗುರೂಜಿ ಪಂಚಪೀಠಗಳಲ್ಲಿ ಮೊದಲನೇ ಪೀಠವಾದ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಪಾದಪೂಜೆ ಮಾಡಿದ್ದಾರೆ.
ವಿನಯ್ಗುರೂಜಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ.
ಇದೇ ಮೊದಲ ಬಾರಿಗೆ ವಿನಯ್ ಗುರೂಜಿ ಪಂಚಪೀಠಗಳಲ್ಲಿ ಮೊದಲನೇ ಪೀಠವಾದ ರಂಭಾಪುರಿ ಪೀಠಕ್ಕೆ ಗುರುವಾರ ಭೇಟಿ ನೀಡಿದ್ದರು. ಇದೇ ವೇಳೆ, ರಂಭಾಪುರಿ ಶ್ರೀಗಳಾದ ಶ್ರೀ ಪ್ರಸನ್ನ ವೀರಸೋಮೇಶ್ವರ ಶಿವಚಾರ್ಯ ಜಗದ್ಗುರುಗಳ ಪಾದಪೂಜೆ ಮಾಡಿ ಪುಷ್ಪಾರ್ಚನೆ ಗೈದಿದ್ದಾರೆ. ಅವಧೂತ ವಿನಯ್ ಗುರೂಜಿ ಇತ್ತೀಚಿಗೆ ಕಾಶಿಗೆ ಹೋಗಿ ಬಂದಿದ್ದರು. ಆಗ ಅಲ್ಲಿಂದ ಶ್ರೀಚಕ್ರ ತಂದಿದ್ದರು. ಅದನ್ನ ರಂಭಾಪುರಿ ಪೀಠಕ್ಕೆ ನೀಡಬೇಕೆಂದು ವಿನಯ್ ಗುರೂಜಿಗೆ ಅವರ ಗುರುಗಳ ಆಜ್ಞೆಯಾಗಿತ್ತಂತೆ. ಆ ಹಿನ್ನೆಲೆ ಇಂದು ರಂಭಾಪುರಿ ಪೀಠಕ್ಕೆ ಬಂದ ವಿನಯ್ ಗುರೂಜಿ ರಂಭಾಪುರಿ ಶ್ರೀಗಳಿಗೆ ಪಾದಪೂಜೆ ಮಾಡಿ, ಪುಷ್ಪಾರ್ಚನೆ ಮಾಡಿದ್ದಾರೆ.
ಪ್ರತಿಮೆ ಕೆಳಗೆ ಶ್ರೀಚಕ್ರ ಇಡುವಂತೆ ಮನವಿ :
ಇತ್ತೀಚೆಗೆ ಕಾಶಿಗೆ ಹೋಗಿದ್ದ ವಿನಯ್ ಗುರೂಜಿ ಎರಡು ಶ್ರೀಚಕ್ರಗಳನ್ನ ತಂದಿದ್ದರು. ಅದರಲ್ಲಿ ಒಂದನ್ನ ರಂಭಾಪುರಿ ಪೀಠಕ್ಕೆ ನೀಡಿದ್ದು, ಶೀಘ್ರದಲ್ಲೇ ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ರೇಣುಕಾಚಾರ್ಯರ 61 ಅಡಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಲಿದೆ. ಆ ಪ್ರತಿಮೆ ಕೆಳಗೆ ಶ್ರೀಚಕ್ರ ಇಡುವಂತೆ ವಿನಯ್ ಗುರೂಜಿ ರಂಭಾಪುರಿ ಶ್ರೀಗಳಿಗೆ ಮನವಿ ಮಾಡಿದ್ದಾರೆ.
ಇನ್ನು ಗುರುವಾರ ಬೆಳಗ್ಗೆ ರಂಭಾಪುರಿ ಪೀಠಕ್ಕೆ ಬಂದ ವಿನಯ್ ಗುರೂಜಿ, ಕ್ಷೇತ್ರನಾಥ ವೀರಭದ್ರ ಸ್ವಾಮಿಗೆ ತಾವೇ ಪೂಜೆ ಮಾಡಿ ದರ್ಶನ ಪಡೆದಿದ್ದಾರೆ. ಮಠದ ಆವರಣದಲ್ಲಿ ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಇದ್ದು, ರಂಭಾಪುರಿ ಶ್ರೀಗಳ ಜೊತೆಯೂ ದೀರ್ಘ ಸಮಾಲೋಚನೆ ನಡೆಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…