Featured

ರಕ್ತದಾನ ಶ್ರೇಷ್ಠ ದಾನ: ಜಯ ಸಿ ಕೋಟ್ಯಾನ್, ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ರಕ್ತದಾನ ಶಿಬಿರ ಚಾಲನೆ.

ಕಾಪು: ಭಾರತದಲ್ಲಿ ರಕ್ತದ ಅವಶ್ಯಕತೆ ಬಹಳಷ್ಟಿದೆ. ರಕ್ತವನ್ನು ಹೆಚ್ಚು ಹೆಚ್ಚು ದಾನ ಮಾಡಬೇಕಿದೆ. ಆರೋಗ್ಯ ತಪಾಸಣೆ, ರಕ್ತದಾನ ಶಿಬಿರದಂತಹ ಕಾರ್ಯಕ್ರಮಗಳ ಮೂಲಕವಾಗಿ ಸಮಾಜದ ಅನೇಕರ ಪ್ರಾಣ ರಕ್ಷಣೆ ಮಾಡಲು ಸಾಧ್ಯವಿದೆ. ಯುವಕರು ಸಂಘಟನಾತ್ಮಕವಾಗಿ ನಡೆಸುವ ರಕ್ತದಾನ ಶಿಬಿರಗಳು ಸಮಾಜಮುಖಿ ಕಾರ್ಯಕ್ರಮಗಳಾಗಿದ್ದು ಇದಕ್ಕೆ ಸಮಾಜದಿಂದಲೂ ಉತ್ತಮ ಸ್ಪಂದನೆ ಹಾಗೂ ಸಹಕಾರ ದೊರಕುತ್ತದೆ ಎಂದು ಕರ್ನಾಟಕ ಅಂಬಿಗರ ಚೌಡಯ್ಯ ಮಹಾಸಭಾದ ಕಾರ್ಯಧ್ಯಕ್ಷ ಜಯ.ಸಿ,ಕೊಟ್ಯಾನ್ ಹೇಳಿದರು.

 

ಮೂಳೂರು ಫೀಶರಿಸ್ ರಸ್ತೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ನೇತೃತ್ವದಲ್ಲಿ , ಕೆ.ವಮ್.ಸಿ ಕಮ್ಯೂನಿಟಿ ವಿಭಾಗ ಮಣಿಪಾಲ, ಮೊಗವೀರ ಯುವ ಸಂಘಟನೆ ಉಡುಪಿ,ಕೆ.ಎಮ್.ಸಿ ರಕ್ತನಿಧಿ ಕೇಂದ್ರ ಹಾಗೂ ಜಿಲ್ಲಾಡಳಿತ ಉಡುಪಿ ಹಾಗೂ ಕೆ,ಎಮ್.ಸಿ ದಂತ ವೈದ್ಯಕೀಯ ಕಾಲೇಜು ಸಹಯೋಗದಲ್ಲಿ ಎ. 1 ರಂದು ನಡೆದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ , ಉಚಿತ ಹೃದ್ರೋಗ ತಪಾಸಣೆ, ಉಚಿತ ಮಧುಮೇಹ, ರಕ್ತದೊತ್ತಡ ಪರೀಕ್ಷೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು.
ಮಣಿಪಾಲ ರಕ್ತ ನಿಧಿ ಕೇಂದ್ರ ವಿಭಾಗದ ಡಾ| ಮನೀಷ್ ಮಾತಾನಾಡಿ ರಕ್ತದಾನ ಶಿಬಿರದ ಹೆಚ್ಚಿ ರಕ್ತ ತೆಗೆಯುತ್ತಾರೆಂಬ ತಪ್ಪು ಕಲ್ಪನೆಯಿದೆ. ದೇಹದಲ್ಲಿ ಉತ್ಪತಿಯಾಗುವ ಶೇ. 8 ರಷ್ಟು ಭಾಗ ರಕ್ತವನ್ನು ಮಾತ್ರ ದಾನ ರೂಪದಲ್ಲಿ ತೆಗೆಯಲಾಗುತ್ತದೆ ಮತ್ತು ಇದರಿಂದ ಜೀವಕ್ಕೆ ಯಾವುದೇ ರೀತಿಯ ಹಾನಿಯಿಲ್ಲ. ಭಾರತದಲ್ಲಿ ಶೇ.40 ಪಾಲು ಮಾತ್ರ ರಕ್ತ ಲಭ್ಯತೆ ಇದ್ದು ಇನ್ನುಳಿದಂತೆ ಶೇ.60 ರಷ್ಟು ರಕ್ತದ ಕೊರತೆ ಕಂಡು ಬರುತ್ತಿದೆ ಎಂದರು.

ಕಳೆದ ಬಾರಿ 150 ಕ್ಕೂ ಅಧಿಕ ಯೂನಿಟ್ ರಕ್ತ ಸಂಗ್ರವಾಗಿದ್ದು 300 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಆರೋಗ್ಯ ತಪಸಣಾ ಶಿಬಿರದಲ್ಲಿ ಭಾಗವಹಿಸಿದ್ದರು.

ಮುಖ್ಯ ಅತಿಥಿಯಾಗಿ ಮೊಗವೀರ ಯುವ ಸಂಘಟನೆ ದೊಡ್ಡಣಗುಡ್ಡೆಯ ಗೌರವ ಸಲಹೆಗಾರ ಸತೀಶ್ ಪುತ್ರನ್,ಕಮ್ಯೂನಿಟಿ ಮೆಡಿಸಿನ್ ವಿಭಾಗ ಅಸಿಸ್ಟೆಂಟ್ ಪ್ರೋಫೆಸರ್ ಡಾ| ದಿವ್ಯ ಪೈ, ಸಮುದಾಯ ದಂತ ವೈದ್ಯ ಡಾ|ನಿಶೂ ಸಿಂಗ್ಲೂ , ಮೂಳೂರು ಮೊಗವೀರ ಮಹಾಸಭಾದ ಅಧ್ಯಕ್ಷ ವಾಸು ಕಾಂಚನ್, ಟ್ರಸ್ಟ್ ನ ಅಧ್ಯಕ್ಷ ಚಂದ್ರಕಾಂತ್ ಕೆ. ಮೆಂಡನ್ ,ಗೌರವ ಸಲಹೆಗಾರ ಅಶೋಕ್ ಪುತ್ರನ್,ಧೀರಜ್ ಉಪಸ್ಥಿತರಿದ್ದರು.

ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ಸದಸ್ಯ ಸಂತೋಷ್ ಪುತ್ರನ್ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ವಿಪಿನ್ ಕಾಂಚನ್ ವಂದಿಸಿ ಕಾರ್ಯ ಕ್ರಮ ನಿರೂಪಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago