ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯದಲ್ಲಿರುವ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಯುದ್ಧ ಟ್ಯಾಂಕ್ ಕೊಡುಗೆಯಾಗಿ ನೀಡಲಾಗಿದೆ.
ಭಾರತೀಯ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಧರ್ಮಸ್ಥಳದ ಮಂಜೂಷಾ ವಸ್ತಸಂಗ್ರಹಾಲಯಕ್ಕೆ ಟಿ-565 ಯುದ್ಧ ಟ್ಯಾಂಕ್ನ್ನು ರವಾನಿಸಲಾಗಿದೆ. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಟಿ-565 ಯುದ್ಧ ಟ್ಯಾಂಕ್ ಬಳಕೆಯಾಗಿದೆ. 1971ರ ಇಂಡೋ-ಪಾಕ್ ಯುದ್ಧ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಈ ಟ್ಯಾಂಕ್ ಭಾಗಿಯಾಗಿದೆ.
40 ಟನ್‌ಗಳಷ್ಟು ತೂಕ ಹೊಂದಿರುವ ಟಿ-565 ಯುದ್ಧ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲವಿದೆ. ಗಂಟೆಗೆ 51 ಕಿ.ಮೀ. ಗರಿಷ್ಠ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. 1968ರಲ್ಲಿ ಭಾರತೀಯ ಸೇನೆಗೆ ಈ ಟ್ಯಾಂಕ್ ಸೇರ್ಪಡೆಯಾಗಿದ್ದು, ಸೋವಿಯತ್ ಒಕ್ಕೂಟ ಸಿಬ್ಬಂದಿ ಇದನ್ನು ನಿರ್ಮಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…