Featured

ರಕ್ಷಣೆಗಾಗಿ  ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ  – vishwanews24

ರಕ್ಷಣೆಗಾಗಿ ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಇರುವ ಠಾಣೆಗೆ ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಬಗ್ಗೆ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ಸಂಬಂಧ 13 ಮಂದಿ ಆರೋಪಿಗಳಿದ್ದಾರೆ. ಬೆಳಗ್ಗೆಯಿಂದ ಮಾಧ್ಯಮದವರು ಕ್ಯಾಮೆರಾ ಹಿಡಿದು ಕುಳಿತಿರುತ್ತಾರೆ. ಪೊಲೀಸರಿಗೆ ಯಾವುದೇ ಅಡತಡೆಗಳಿಲ್ಲದೇ ವಿಚಾರಣೆ ಮಾಡಲು ಅವಕಾಶಬೇಕು. ಆ ಹಿತದೃಷ್ಟಿಯಿಂದ ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ ತಿಳಿಸಿದರು.

ದರ್ಶನ್ ಪ್ರಕರಣ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡದ ಆರೋಪದ ಕುರಿತು ಮಾತನಾಡಿದ ಅವರು, ಸರ್ಕಾರದ ಯಾವ ಒತ್ತಡವೂ ಇಲ್ಲ, ಈ ಬಗ್ಗೆ ನಾನು ವಿಚಾರಿಸಿದ್ದೇನೆ. ನಮ್ಮ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರು ಇದರಲ್ಲಿ ಇನ್ವಾಲ್ ಆಗಿಲ್ಲ. ಯಾರೂ ಕೂಡ ಈ ಕೇಸ್‌ನಲ್ಲಿ ಹಸ್ತಕ್ಷೇಪ ಮಾಡ್ತಿಲ್ಲ. ಈ ಪ್ರಕರಣದ ಬಗ್ಗೆ ನಾವು ಪ್ರತಿಕ್ರಿಯೆ ಕೂಡ ಮಾಡುತ್ತಿಲ್ಲ ಎಂದು ಹೇಳಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

12 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

12 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

12 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

15 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

15 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago