ಬಹುಭಾಷಾ ನಟಿಯಾಗಿ ರಶ್ಮಿಕಾ ಮಂದಣ್ಣ ಸದ್ದು ಮಾಡ್ತಿದ್ದಾರೆ. ಸದ್ಯ `ಮಿಷನ್ ಮಜ್ನು’ ಚಿತ್ರದ ಪ್ರಚಾರ ಕಾರ್ಯದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕಿರಿಕ್ ಬ್ಯೂಟಿ ರಶ್ಮಿಕಾ, ರಕ್ಷಿತ್ ಮತ್ತು ರಿಷಬ್ ಮತ್ತು ಪುನೀತ್ ರಾಜ್‌ಕುಮಾರ್ ಅವರನ್ನ ನೆನಪಿಸಿಕೊಂಡಿದ್ದಾರೆ. ಇಬ್ಬರ ಬಗ್ಗೆ ಮಾತನಾಡಿರುವ ನಟಿಯ ಹೇಳಿಕೆ ಸಖತ್ ಸದ್ದು ಮಾಡುತ್ತಿದೆ.
ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದೇ ಕಿರಿಕ್ ಪಾರ್ಟಿ ಸಿನಿಮಾದಿಂದ, ರಿಷಬ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ರಶ್ಮಿಕಾ ನಟಿಸಿದ್ದರು. ಎರಡನೇ ಸಿನಿಮಾ `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ರಶ್ಮಿಕಾ ನಟಿಸಿದ್ದರು. ರಶ್ಮಿಕಾ ನಟಿಸಿದ ಈ ಎರಡು ಸಿನಿಮಾಗಳ ಬಗ್ಗೆ ಸಂದರ್ಶನವೊಂದರಲ್ಲಿ ಮತ್ತೆ ಪ್ರಶ್ನೆ ಎದುರಾಗಿದೆ. ಈ ನಟಿ ಅಚ್ಚರಿಯ ಹೇಳಿಕೆಯನ್ನ ಕೊಟ್ಟಿದ್ದಾರೆ.
ರಕ್ಷಿತ್ ಶೆಟ್ಟಿಹಾಗೂ ರಿಷಬ್ ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು. ಅವರು ನನಗೆ ಅವಕಾಶ ನೀಡಿದರು. `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ನಟಿಸಿದೆ. ಅವರು ವಿಶಾಲವಾಗಿ ಹೇಗೆ ಆಲೋಚಿಸೋದು ಅಂತಾ ಹೇಳಿಕೊಟ್ಟರು. ನಾನು ನಾಲ್ಕು ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನೇ ಅಚ್ಚರಿಗೊಳ್ಳುತ್ತೇನೆ. ನನ್ನ ಕಡೆಯಿಂದ ಅವರಿಗೆ ಧನ್ಯವಾದ ಎಂದಿದ್ದಾರೆ ರಶ್ಮಿಕಾ.
Join our Whatsapp group by clicking the below link 👇👇
https://chat.whatsapp.com/KfUmhXQKZb114i4QHNvqEK
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…