Featured

ರಘುಪತಿ ಭಟ್ ತಮ್ಮ ಸ್ವಾರ್ಥ ಸಾಧನೆಗಾಗಿ ಇಡೀ ಸಹಕಾರಿ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದಾರೆ : ಯಶ್‌ಪಾಲ್ ಸುವರ್ಣ – vishwanews24

ಹೈಕೋರ್ಟ್ ತಡೆಯಾಜ್ಞೆ ಪ್ರತಿಯನ್ನು ರಘುಪತಿ ಭಟ್ ತಕ್ಷಣ ಜಿಲ್ಲಾ ಎಸ್ಪಿಗೆ ನೀಡಲಿ : ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ಇಂದು ಮತ್ತೊಮ್ಮೆ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ತನ್ನ ಸುಸ್ಟಿದಾರರ ಎಫ್ ಐ ಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿದೆ ಅದನ್ನು ತಕ್ಷಣ ತೆರವು ಮಾಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಪತ್ರ ಬರೆದು ಮಾಧ್ಯಮಗಳಿಗೆ ಸುಳ್ಳು ಮಾಹಿತಿ ನೀಡಿದ್ದು, ಈ ತಡೆಯಾಜ್ಞೆ ಪ್ರತಿಯನ್ನು ರಘುಪತಿ ಭಟ್ ಬಳಿ ಇದ್ದರೆ ತಕ್ಷಣ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮಾಧ್ಯಮಗಳಿಗೆ ನೀಡುವಂತೆ ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ..

ದಿನಾಂಕ ನವೆಂಬರ್ 9 ರಂದು ಪತ್ರಿಕಾಗೋಷ್ಟಿ ನಡೆಸಿ ರಘುಪತಿ ಭಟ್ ಆಧಾರ ರಹಿತ ಆರೋಪಗಳಿಗೆ ಬ್ಯಾಂಕಿನ ಆಡಳಿತ ಮಂಡಳಿ ಉತ್ತರ ನೀಡಿ ಯಾವುದೇ ತನಿಖೆಗೆ ಸ್ವಾಗತ ಎಂದು ತಿಳಿಸಿದರೂ, ಹತಾಶ ಮನಸ್ಥಿತಿಯ ರಘುಪತಿ ಭಟ್ ಇದೀಗ ನ್ಯಾಯಾಂಗ ವ್ಯವಸ್ಥೆಯನ್ನೇ ತಿರುಚಿ ಸುಳ್ಳು ಸುದ್ದಿ ಸೃಷ್ಟಿಸಿ ಮಾಧ್ಯಮಗಳು ಹಾಗೂ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ.

ರಘುಪತಿ ಭಟ್ ರವರು ಇದೀಗ ತಮ್ಮ ಸ್ವಾರ್ಥ ಸಾಧನೆಗಾಗಿ ಇಡೀ ಸಹಕಾರಿ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ಇದು ಇಡೀ ಸಹಕಾರಿ ಕ್ಷೇತ್ರಕ್ಕೆ ಮಾಡಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago