ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಸೂಕ್ತ ತನಿಖೆಯಾಗಲಿ, ಆಗ ಗೊತ್ತಾಗಲಿದೆ ಎಂದರು.
ಗ್ಯಾರಂಟಿ ಸಮಿತಿಗಳ ವಿರುದ್ಧದ ಬಿಜೆಪಿ ಪ್ರತಿಭಟನೆ ಕುರಿತು ಮಾತನಾಡಿದ ಅವರು, 2023ರಲ್ಲಿ ಸರ್ಕಾರ ರಚನೆಯಾದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಳಿಕ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ದೃಷ್ಟಿಯಿಂದ ಗ್ಯಾರಂಟಿ ಸಮಿತಿಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಚಿಸಲಾಯಿತು. ಈಗ ಸಮಿತಿಗಳನ್ನು ರದ್ದುಗೊಳಿಸುವಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟಕ್ಕೆ ಅರ್ಥವಿಲ್ಲ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…