ರಫೇಲ್ ಡೀಲ್ : ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ -Vishwanews24
ಹೊಸದಿಲ್ಲಿ: ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.
ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಮೇ 10ರಂದು ಪೂರ್ಣಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
ಕೇಂದ್ರಕ್ಕೆ ನೀಡಿರುವ ಕ್ಲೀನ್ ಚಿಟ್ ಸಂಬಂಧಿಸಿ ಮತ್ತೆ ಪರಿಶೀಲನೆ ನಡೆಸಬೇಕೆಂದು ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು.
ರಫೇಲ್ ಖರೀದಿ ಒಪ್ಪಂದದಲ್ಲಿ ಅಕ್ರಮ ನಡೆದಿದ್ದು, ವಿಶೇಷ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ 2018ರ ಡಿಸೆಂಬರ್ 14ರಂದು ವಜಾ ಮಾಡಿತ್ತು. ಹೀಗಾಗಿ ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಕೆ.ಎಂ.ಜೋಸೆಫ್ ಅವರಿರುವ ತ್ರಿಸದಸ್ಯಪೀಠ ತೀರ್ಪು ಪ್ರಕಟಿಸಲಿದೆ.
