ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪ ಕುರಿತಂತೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ತಿರಸ್ಕರಿಸಿದ್ದು, ರಫೇಲ್ ಪ್ರಕರಣದ ತನಿಖೆ ಅಗತ್ಯವಿಲ್ಲ ಎಂದು ತೀರ್ಪು ನೀಡುವ ಮೂಲಕ ಕೇಂದ್ರಕ್ಕೆ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ನ.14ರಂದು ತೀರ್ಪು ಕಾಯ್ದಿರಿಸಿತ್ತು. ವಕೀಲ ಎಂ.ಎಲ್.ಶರ್ಮಾ ರಫೇಲ್ ಯುದ್ಧ ವಿಮಾನ ಖರೀದಿ ಅವ್ಯವಹಾರದ ಸಂಬಂಧ ಮೊದಲು ಪ್ರಕರಣ ದಾಖಲಿಸಿದ್ದು, ನಂತರ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ನಾ, ಅರುಣ್ ಶೌರಿ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕೂಡ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ದೂರು ಸಲ್ಲಿಸಿದ್ದರು.
ಇಂದು ತೀರ್ಪು ಪ್ರಕಟಿಸಿರುವ ನ್ಯಾಯಪೀಠ ತನಿಖೆಗೆ ಅಸಮ್ಮತಿ ಸೂಚಿಸಿದ್ದು, ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿದೆ. ವಿಮಾನ ಖರೀದಿ ಪ್ರಕ್ರಿಯೆಯು ನಮಗೆ ತೃಪ್ತಿಯನ್ನು ತಂದಿದೆ. ಒಪ್ಪಂದ ಕುರಿತು ಯಾವುದೇ ರೀತಿಯ ಸಂಶಯಗಳೂ ಮೂಡುತ್ತಿಲ್ಲ. ಯಾವುದೇ ರೀತಿಯ ಸಿದ್ಥತೆಗಳಿಲ್ಲದೆ ಒಂದು ದೇಶ ಇರಲು ಸಾಧ್ಯವಿಲ್ಲ. 126 ಯುದ್ಧ ವಿಮಾನಗಳನ್ನೇ ಖರೀದಿ ಮಾಡುವಂತೆ ಸರ್ಕಾರಕ್ಕೆ ನಾವು ಒತ್ತಾಯ ಮಾಡಲು ಸಾಧ್ಯವಿಲ್ಲ. ಪ್ರತೀಯೊಂದು ಭಾಗದಲ್ಲೂ ಅಂಶಗಳಲ್ಲೂ ನ್ಯಾಯಾಲಯ ಪರಿಶೀಲನೆ ನಡೆಸುವುದು ಸರಿಯಲ್ಲ. ಬೆಲೆ ಹೋಲಿಕೆ ಮಾಡುವುದು ನ್ಯಾಯಾಲಯದ ಕೆಲಸವೂ ಅಲ್ಲ ಎಂದು ಹೇಳಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…