Featured

ರಫೇಲ್ ಹಗರಣ : ಕಾಂಗ್ರೆಸ್‌ ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಪ್ರಧಾನಿ ಮೋದಿಗೆ ಸಾತ್ ನೀಡಿದ ​ಎನ್‌ಸಿಪಿ ನೇತಾರ ಶರದ್ ಪವಾರ್

ಮುಂಬಯಿ: ರಫೇಲ್‌ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಎನ್‌ಸಿಪಿ ನೇತಾರ ಶರದ್‌ ಪವಾರ್‌ ಅವರು ಪ್ರಧಾನಿ ಮೋದಿಯ ನೆರವಿಗೆ ಧಾವಿಸಿದ್ದಾರೆ. 

ರಫೇಲ್‌ ವಿಮಾನ ಖರೀದಿ ವಿಚಾರದಲ್ಲಿ ಮೋದಿ ಅವರ ಉದ್ದೇಶದ ಬಗ್ಗೆ ಜನರಿಗೆ ಯಾವುದೇ ಅನುಮಾನವಿಲ್ಲ ಎಂದು ಪವಾರ್‌ ಹೇಳಿದ್ದಾರೆ. 

ಮರಾಠಿ ನ್ಯೂಸ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ರಕ್ಷಣಾ ಸಚಿವ ಪವಾರ್‌, ವಿಪಕ್ಷಗಳು ಫೈಟರ್‌ ಜೆಟ್‌ಗಳಿಗೆ ಸಂಬಂಧಿಸಿದ ಟೆಕ್ನಿಕಲ್‌ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುತ್ತಿರುವುದಕ್ಕೆ ಅರ್ಥವೇ ಇಲ್ಲ. ವಿಮಾನಗಳ ಬೆಲೆ ಬಹಿರಂಗಪಡಿಸುವುದರಿಂದ ಸರಕಾರಕ್ಕೆ ಏನೂ ತೊಂದರೆಯಾಗುವುದಿಲ್ಲ ಎಂದು ಹೇಳಿದರು.

ಆದರೆ ಈ ವಿಚಾರದಲ್ಲಿ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಸರಕಾರದ ಪರವಾಗಿ ಮಂಡಿಸಿರುವ ವಿಚಾರಗಳು ಜನರಲ್ಲಿ ಗೊಂದಲ ಹುಟ್ಟಿಸಿವೆ. ನಿರ್ಮಲಾ ಅವರ ಬದಲು ಹಣಕಾಸು ಸಚಿವ ಅರುಣ್‌ ಜೇಟ್ಲಿ ಈ ಬಗ್ಗೆ ಸರಕಾರದ ನಿಲುವನ್ನು ಪ್ರಕಟಿಸಬಹುದು ಎಂದು ಶರದ್‌ ಪವಾರ್‌ ಹೇಳಿದರು.

ರಫೇಲ್‌ ಖರೀದಿಯಲ್ಲಿ ಪ್ರಧಾನಿ ಮೋದಿ ನಿಯಮ ಉಲ್ಲಂಘಿಸಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಸರಕಾರದ ಖಜಾನೆಗೆ ನಷ್ಟವುಂಟು ಮಾಡುವ ಜತೆಗೆ ರಾಷ್ಟ್ರೀಯ ಭದ್ರತೆಗೂ ಧಕ್ಕೆ ತರಲಾಗಿದೆ ಎಂಬುದು ವಿಪಕ್ಷಗಳ ಆರೋಪವಾಗಿದೆ.

ಮೋದಿ ವಿರೋಧಿಗಳ ಮಹಾ ಒಕ್ಕೂಟದಲ್ಲಿ ಪ್ರಮುಖ ನಾಯಕರಾಗಿರುವ ಶರತ್ ಪವಾರ್ ಅವರ ಈ ಹೇಳಿಕೆ ಅಕ್ಷರಶಃ ವಿರೋಧ ಪಕ್ಷಗಳಿಗೆ ಆಘಾತವನ್ನು ಉಂಟು ಮಾಡಿದೆ.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago