ಮುಂಬಯಿ: ರಫೇಲ್ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸರಕಾರದ ವಿರುದ್ಧ ಮುಗಿ ಬೀಳುತ್ತಿರುವಾಗ ಎನ್‌ಸಿಪಿ ನೇತಾರ ಶರದ್ ಪವಾರ್ ಅವರು ಪ್ರಧಾನಿ ಮೋದಿಯ ನೆರವಿಗೆ ಧಾವಿಸಿದ್ದಾರೆ.
ರಫೇಲ್ ವಿಮಾನ ಖರೀದಿ ವಿಚಾರದಲ್ಲಿ ಮೋದಿ ಅವರ ಉದ್ದೇಶದ ಬಗ್ಗೆ ಜನರಿಗೆ ಯಾವುದೇ ಅನುಮಾನವಿಲ್ಲ ಎಂದು ಪವಾರ್ ಹೇಳಿದ್ದಾರೆ.
ಮರಾಠಿ ನ್ಯೂಸ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ರಕ್ಷಣಾ ಸಚಿವ ಪವಾರ್, ವಿಪಕ್ಷಗಳು ಫೈಟರ್ ಜೆಟ್‌ಗಳಿಗೆ ಸಂಬಂಧಿಸಿದ ಟೆಕ್ನಿಕಲ್ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುತ್ತಿರುವುದಕ್ಕೆ ಅರ್ಥವೇ ಇಲ್ಲ. ವಿಮಾನಗಳ ಬೆಲೆ ಬಹಿರಂಗಪಡಿಸುವುದರಿಂದ ಸರಕಾರಕ್ಕೆ ಏನೂ ತೊಂದರೆಯಾಗುವುದಿಲ್ಲ ಎಂದು ಹೇಳಿದರು.
ಆದರೆ ಈ ವಿಚಾರದಲ್ಲಿ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಸರಕಾರದ ಪರವಾಗಿ ಮಂಡಿಸಿರುವ ವಿಚಾರಗಳು ಜನರಲ್ಲಿ ಗೊಂದಲ ಹುಟ್ಟಿಸಿವೆ. ನಿರ್ಮಲಾ ಅವರ ಬದಲು ಹಣಕಾಸು ಸಚಿವ ಅರುಣ್ ಜೇಟ್ಲಿ ಈ ಬಗ್ಗೆ ಸರಕಾರದ ನಿಲುವನ್ನು ಪ್ರಕಟಿಸಬಹುದು ಎಂದು ಶರದ್ ಪವಾರ್ ಹೇಳಿದರು.
ರಫೇಲ್ ಖರೀದಿಯಲ್ಲಿ ಪ್ರಧಾನಿ ಮೋದಿ ನಿಯಮ ಉಲ್ಲಂಘಿಸಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಸರಕಾರದ ಖಜಾನೆಗೆ ನಷ್ಟವುಂಟು ಮಾಡುವ ಜತೆಗೆ ರಾಷ್ಟ್ರೀಯ ಭದ್ರತೆಗೂ ಧಕ್ಕೆ ತರಲಾಗಿದೆ ಎಂಬುದು ವಿಪಕ್ಷಗಳ ಆರೋಪವಾಗಿದೆ.
ಮೋದಿ ವಿರೋಧಿಗಳ ಮಹಾ ಒಕ್ಕೂಟದಲ್ಲಿ ಪ್ರಮುಖ ನಾಯಕರಾಗಿರುವ ಶರತ್ ಪವಾರ್ ಅವರ ಈ ಹೇಳಿಕೆ ಅಕ್ಷರಶಃ ವಿರೋಧ ಪಕ್ಷಗಳಿಗೆ ಆಘಾತವನ್ನು ಉಂಟು ಮಾಡಿದೆ.
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…