ಬೆಂಗಳೂರು: ಅತ್ಯಾಚಾರವನ್ನು ಆನಂದಿಸಿ ಎಂಬ ರಮೇಶ್ ಕುಮಾರ್ ಹೇಳಿಕೆಗೆ ಕಿಡಿಕಾರಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, “ರಮೇಶ್ ಕುಮಾರ್ ಅವರು ಪ್ರಜಾಪ್ರಭುತ್ವದ ದೇವಾಲಯದ ಪಾವಿತ್ರ್ಯತೆಯನ್ನು ಅವಮಾನಿಸಿದ್ದಾರೆ. ಅವರನ್ನು ಸುವರ್ಣಸೌಧ ಪ್ರವೇಶಿಸಲು ಬಿಡಬಾರದು” ಎಂದಿದ್ದಾರೆ.
“ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವವರ ಮನಸ್ಥಿತಿ ಕಂಡು ಬೇಸರವಾಗುತ್ತಿದೆ. ರಮೇಶ್ ಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಿತ್ತೊಗೆಯಬೇಕು” ಎಂದು ಆಗ್ರಹಿಸಿದ್ದಾರೆ.
“ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಹ ಕ್ಷಮೆಯಾಚಿಸಿದ್ದು, “ನಿನ್ನೆ ನಡೆದ ಕಲಾಪದಲ್ಲಿ ನಮ್ಮದೇ ಶಾಸಕರೊಬ್ಬರು ಆಡಿದ ಮಾತನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾಗಿರುವ ನನಗೆ ಕಾಂಗ್ರೆಸ್ ಶಾಸರೊಬ್ಬರು ಈ ರೀತಿಯ ಮಾತುಗಳನ್ನಾಡಿದ್ದಕ್ಕೆ ಬೇಸರವಾಗಿದೆ. ಕರ್ನಾಟಕದ ಎಲ್ಲಾ ಮಹಿಳೆಯರು ಕ್ಷಮಿಸಿಬಿಡಿ. ಈ ರೀತಿಯ ಮಾತುಗಳು ಎಂದಿಗೂ ಪುನರಾವರ್ತನೆಯಾಗದಂತೆ ನಾನು ಖಚಿತಪಡಿಸುತ್ತೇನೆ” ಎಂದಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…