Featured

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ : ವಿಚಾರಣೆಯನ್ನು ಅ. 7ಕ್ಕೆ ಮುಂದೂಡಿದ ಹೈಕೋರ್ಟ್‌ -Vishwanews24

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ : ವಿಚಾರಣೆಯನ್ನು ಅ. 7ಕ್ಕೆ ಮುಂದೂಡಿದ ಹೈಕೋರ್ಟ್‌ -Vishwanews24

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರದ್ದು ಎನ್ನಲಾಗಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಅಕ್ಟೋಬರ್‌ 7ಕ್ಕೆ ಮುಂದೂಡಿದೆ.

ಎಸ್‌ಐಟಿ ತಂಡ ರಚಿಸಿ ನಗರ ಪೊಲೀಸ್‌ ಆಯುಕ್ತರು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ, ಸಂತ್ರಸ್ತ ಯುವತಿ ಸೇರಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ನಡೆಸಿದೆ.

ಹೈಕೋರ್ಟ್‌ ಅನುಮತಿ ಇಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನಡೆಸಿರುವ ತನಿಖೆಯ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ. ಹೀಗಾಗಿ ಹೈಕೋರ್ಟ್‌ ನ ಮುಂದಿನ ಆದೇಶಕ್ಕೆ ಒಳಪಟ್ಟು ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಬೇಕು. ಈ ಸಂಬಂಧ ನ್ಯಾಯಾಲಯ ಹಿಂದೆ ಹೊರಡಿಸಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕೆಂದು ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ ಮನವಿ ಮಾಡಿದರು.

ಇನ್ನು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್‌, ಎಸ್‌ಐಟಿ ರಚನೆಯ ಸಿಂಧುತ್ವವನ್ನೇ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಒಂದು ವೇಳೆ ನ್ಯಾಯಾಲಯ ಎಸ್‌ಐಟಿ ರಚನೆಯನ್ನೇ ಅಸಿಂಧುಗೊಳಿಸಿದರೆ, ಎಲ್ಲವೂ ನಿರರ್ಥಕವಾಗಲಿದೆ. ಆದ್ದರಿಂದ ಎಸ್‌ಐಟಿ ರಚನೆಯ ಕಾನೂನಾತ್ಮಕ ಮತ್ತು ಸಾಂವಿಧಾನಿಕ ಸಿಂಧುತ್ವವನ್ನು ನಿರ್ಧಾರ ಮಾಡಬೇಕಿದೆ ಎಂದರು.

ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಅನುಮತಿ ನೀಡುವ ಮುನ್ನ ಅನೇಕ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದ್ದು ವಿಚಾರಣೆಯನ್ನು ಅ.7ಕ್ಕೆ ಮುಂದೂಡಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago