ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾಗಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 7ಕ್ಕೆ ಮುಂದೂಡಿದೆ.
ಎಸ್‌ಐಟಿ ತಂಡ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ, ಸಂತ್ರಸ್ತ ಯುವತಿ ಸೇರಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ನಡೆಸಿದೆ.
ಹೈಕೋರ್ಟ್ ಅನುಮತಿ ಇಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನಡೆಸಿರುವ ತನಿಖೆಯ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ. ಹೀಗಾಗಿ ಹೈಕೋರ್ಟ್ ನ ಮುಂದಿನ ಆದೇಶಕ್ಕೆ ಒಳಪಟ್ಟು ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಬೇಕು. ಈ ಸಂಬಂಧ ನ್ಯಾಯಾಲಯ ಹಿಂದೆ ಹೊರಡಿಸಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕೆಂದು ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಮನವಿ ಮಾಡಿದರು.
ಇನ್ನು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್, ಎಸ್‌ಐಟಿ ರಚನೆಯ ಸಿಂಧುತ್ವವನ್ನೇ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಒಂದು ವೇಳೆ ನ್ಯಾಯಾಲಯ ಎಸ್‌ಐಟಿ ರಚನೆಯನ್ನೇ ಅಸಿಂಧುಗೊಳಿಸಿದರೆ, ಎಲ್ಲವೂ ನಿರರ್ಥಕವಾಗಲಿದೆ. ಆದ್ದರಿಂದ ಎಸ್‌ಐಟಿ ರಚನೆಯ ಕಾನೂನಾತ್ಮಕ ಮತ್ತು ಸಾಂವಿಧಾನಿಕ ಸಿಂಧುತ್ವವನ್ನು ನಿರ್ಧಾರ ಮಾಡಬೇಕಿದೆ ಎಂದರು.
ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಅನುಮತಿ ನೀಡುವ ಮುನ್ನ ಅನೇಕ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದ್ದು ವಿಚಾರಣೆಯನ್ನು ಅ.7ಕ್ಕೆ ಮುಂದೂಡಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…