Featured

ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ನಮ್ಮ ಸಹಮತವಿದೆ : ಸಚಿವ ಆರ್. ಅಶೋಕ್ -Vishwanews24

ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ನಮ್ಮ ಸಹಮತವಿದೆ..

ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಶ್ರಮ ಸಾಕಷ್ಟಿದೆ : ಸಚಿವ ಆರ್. ಅಶೋಕ್

ಹಾಸನ: ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ನಮ್ಮ ಸಹಮತವಿದೆ. ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಶ್ರಮ ಸಾಕಷ್ಟಿದೆ. ಈಗ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಪಕ್ಷದಲ್ಲಿ ಸಮನ್ವಯತೆ ಇಲ್ಲ. ಪಕ್ಷದ ರೈಲು ಇನ್ನೂ ಟ್ರ್ಯಾಕ್ ಗೆ ಇಳಿದಿಲ್ಲ. ಕೇಂದ್ರದಲ್ಲೂ ಸಹ ಸಮರ್ಥ ವಿರೋಧ ಪಕ್ಷದ ನಾಯಕರು ಇಲ್ಲದೆ ತಬ್ಬಿಬ್ಬಾಗಿದೆ. ಇಂತಹ ಸ್ಥಿತಿಯಲ್ಲಿ ಕಾಂಗ್ರೆಸ್ ನಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಜಾತಿ ರಾಜಕೀಯದಲ್ಲಿ ತೊಡಗಿರುವ ಪಕ್ಷದಲ್ಲಿ ಸಂವಿಧಾನ ಬದಲಾವಣೆ ಮೂಲಕ ಜಾತಿಗೊಂದರಂತೆ ಸಿಎಂ ಕುರ್ಚಿಯನ್ನು ಸೃಷ್ಟಿ ಮಾಡಬೇಕು ಅಷ್ಟೇ. ಅದು ಸಹ ಕಷ್ಟ ಸಾಧ್ಯ ಆದ್ದರಿಂದ ಕಾಂಗ್ರೆಸ್ ರಾಜ್ಯದಲ್ಲಿ ಮುಂದಿನ 20 ವರ್ಷ ಅಧಿಕಾರಕ್ಕೆ ಬರುವುದು ಸುಳ್ಳು ಎಂದು ಭವಿಷ್ಯ ನುಡಿದರು.

ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಾಗಿದ್ದ ಅವಧಿಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿದರು ಎಂದು ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರ ಜಗಳವನ್ನು ಪ್ರೇಕ್ಷಕರಾಗಿ ನೋಡುತ್ತಿದ್ದೇವೆ. ನಮ್ಮ ಬಿಜೆಪಿ ಸರ್ಕಾರದಿಂದ ಕೇವಲ ಅಭಿವೃದ್ಧಿಯ ಮಂತ್ರ ಜಪ ಮಾಡಲಾಗುತ್ತಿದ್ದು, ಕೊರೊನಾ ಹತೋಟಿ, ಲಸಿಕೆ ಕಾರ್ಯಕ್ರಮ ಯಶಸ್ಸಿಗೆ ಹಾಗೂ ಜನರ ಆರ್ಥಿಕ ಸುಧಾರಣೆಗೆ ಕೆಲಸ ಮಾಡುತ್ತಿದ್ದೇವೆ ಎಂದರು ..

ಎರಡು ವರ್ಷ ಬಿಎಸ್‍ವೈ ಸಿಎಂ:

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿರುವ ಯಡಿಯೂರಪ್ಪ ಅವರು ಮುಂದಿನ ಮೂರನೇ ಅಲೆಯನ್ನು ಸಹ ಅವರ ನೇತೃತ್ವದಲ್ಲಿಯೇ ನಿರ್ವಹಣೆ ಮಾಡಲಾಗುವುದು ಹಾಗೂ 2 ವರ್ಷದವರೆಗೆ ಸಿಎಂ ಬದಲಾವಣೆ ಪ್ರಶ್ನೆ ಇಲ್ಲ ಎಂದು ಪುನರುಚ್ಚರಿಸಿದರು. ಮುಂದಿನ ಡಿಸೆಂಬರ್ ಒಳಗೆ ರಾಜ್ಯದ ಎಲ್ಲಾ ಜನರಿಗೆ 2 ಡೋಸ್ ಲಸಿಕೆ ಹಾಕಲು ತಯಾರಿ ಮಾಡುತ್ತಿದ್ದೇವೆ. ಕೊರೊನಾ ಮೂರನೇ ಅಲೆ ತಡೆಗಟ್ಟಲು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದು ಮುಂದಿನ ದಿನಗಳಲ್ಲಿ ಕಾರ್ಯಗತವಾಗಲಿದೆ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago