ಮೈಸೂರು : ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ವ್ಯವಹಾರ ನಡೆದಿದೆ. ಪ್ರಕರಣದಲ್ಲಿ ದೊಡ್ಡ ದೊಡ್ಡವರ ಕೈವಾಡವಿದೆ. ಕಳೆದ ಮೂರು ತಿಂಗಳಿಂದ ಈ ಡೀಲ್ ನಡೆದಿದೆ. ಪ್ರಕರಣದ ತನಿಖೆಯನ್ನು ಮಾಡಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
ರಮೇಶ್ ಜಾರಕಿಹೊಳಿ ಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಉದ್ದೇಶದಿಂದ ಸಿಡಿ ಬ್ಲಾಕ್ ಮೇಲ್ ಮಾಡಲಾಗಿದೆ. ಇದೀಗ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಸಫಲರಾಗಿದ್ದಾರೆ.
ನಾನು ಈ ಪ್ರಕರಣವನ್ನು ನೋಡಿ ಖುಷಿ ಪಡುವವನಲ್ಲ. ನಾನು ಒಂದು ಕಲ್ಲು ಹೊಡೆಯಬೇಕು ಎಂದು ಹೊಡೆಯಲ್ಲ.ನನಗೆ ತಿಳಿದುಬಂದಿರುವ ಮೂಲಗಳ ಮಾಹಿತಿ ಪ್ರಕಾರ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…