Featured

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಸಂತ್ರಸ್ತೆಯ ಅರ್ಜಿ ಏಕಸದಸ್ಯ ಪೀಠಕ್ಕೆ ವರ್ಗಾವಣೆ – Vishwanews24

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಸಂತ್ರಸ್ತೆಯ ಅರ್ಜಿ ಏಕಸದಸ್ಯ ಪೀಠಕ್ಕೆ ವರ್ಗಾವಣೆ – Vishwanews24

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.

ಆದರೆ ಎಸ್ ಐ ಟಿ ರಚನೆ ಪ್ರಶ್ನಿಸಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಏಕಸದಸ್ಯ ಪೀಠಕ್ಕೆ ವರ್ಗಾಯಿಸಿದೆ. ಇದರಿಂದಾಗಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿ ಎರಡೂ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದವು.

ಇದನ್ನೂ ಓದಿ :

ವಿಚಾರಣೆ ನಡೆಸಿದ ನ್ಯಾಯಪೀಠ, ಎಸ್ ಐಟಿ ರಚನೆ ಪ್ರಶ್ನಿಸಿ ಪಿಐಎಲ್ ಹೂಡಲಾಗಿದೆ. ಆದರೆ ಸಂತ್ರಸ್ತೆಯೇ ಅದೇ ಎಸ್ಐಟಿ ರಚನೆ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಕಾರಣ ಪಿಐಎಲ್ ಅರ್ಜಿಯನ್ನು ಉಳಿಸಿಕೊಳ್ಳುವ ಅಗತ್ಯ ಏನೂ ಇಲ್ಲ ಎಂದು ಅಭಿಪ್ರಾಯಪಟ್ಟು ಇತ್ಯರ್ಥಪಡಿಸಿತು.

ಜೊತೆಗೆ ಸಂತ್ರಸ್ತೆ ಅರ್ಜಿಯನ್ನು ಏಕಸದಸ್ಯಪೀಠಕ್ಕೆ ವರ್ಗಾಯಿಸಿದ ವಿಭಾಗೀಯ ನ್ಯಾಯಪೀಠ, ಅರ್ಜಿಯನ್ನು ರೋಸ್ಟರ್ ಪ್ರಕಾರ ಸಂಬಂಧಪಟ್ಟ ನ್ಯಾಯಪೀಠ ಮುಂದೆಗೆ ವಿಚಾರಣೆಗೆ ನಿಗದಿಪಡಿಸಲು ಆದೇಶಿಸಿತು. ಸಂತ್ರಸ್ತೆಯು ಸಲ್ಲಿಸಿರುವ ಮತ್ತೊಂದು ಅರ್ಜಿಯನ್ನು ನ್ಯಾಯಪೀಠವೇ ವಿಚಾರಣೆ ಮುಂದುವರಿಸಲಿದೆ. ಅಲ್ಲದೆ, ನ್ಯಾಯಪೀಠ ಪಿಐಎಲ್ ಅಲ್ಲಿ ಸಲ್ಲಿಸಲಾಗಿರುವ ಅಗತ್ಯ ದಾಖಲೆಗಳನ್ನು ರೋಸ್ಟರ್ ನ್ಯಾಯಪೀಠಕ್ಕೆ ಒದಗಿಸುವ ಉದ್ದೇಶದಿಂದ ಪಿಐಎಲ್ ಅನ್ನು ಸಂತ್ರಸ್ತೆಯ ಅರ್ಜಿಯೊಂದಿಗೆ ಸೇರಿಸಬಹುದು ಎಂದು ತಿಳಿಸಿದೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago