Featured

ರಶ್ಮಿಕಾನ ಬ್ಯಾನ್ ಮಾಡಿದ್ರೆ ಕನ್ನಡ ಚಿತ್ರರಂಗಕ್ಕೆ ನಷ್ಟ : ಮೈನಾ ನಿರ್ದೇಶಕ ನಾಗಶೇಖರ್ – Vishwanews24

ರಶ್ಮಿಕಾನ ಬ್ಯಾನ್ ಮಾಡಿದ್ರೆ ಕನ್ನಡ ಚಿತ್ರರಂಗಕ್ಕೆ ನಷ್ಟ ..

ಒಬ್ಬ ಒಳ್ಳೆಯ ಕಲಾವಿದೆಯನ್ನ ಬ್ಯಾನ್ ಮಾಡುವುದು ಸರಿಯಲ್ಲ ..

ಮುಂದಿನ ದಿನಗಳಲ್ಲಿ ಕನ್ನಡದ ಸಿನಿಮಾಗೆ ರಶ್ಮಿಕಾ ರೀತಿಯ ನಟಿ ಬೇಕು ಎಂದುಕೊಳ್ಳುತ್ತೇವೆ

ಮೈನಾ ನಿರ್ದೇಶಕ ನಾಗಶೇಖರ್

ಕರ್ನಾಟಕದಲ್ಲಿ ಬ್ಯಾನ್ ಆಕ್ರೋಶದ ಬೆನ್ನಲ್ಲೇ ʻಮೈನಾʼ ನಿರ್ದೇಶಕ ನಾಗಶೇಖರ್ ಈ ಬಗ್ಗೆ ಮಾತನಾಡಿದ್ದಾರೆ. ರಶ್ಮಿಕಾನ ಬ್ಯಾನ್ ಮಾಡಿದ್ರೆ ಕನ್ನಡ ಚಿತ್ರರಂಗಕ್ಕೆ ನಷ್ಟ ಎಂಬ ಹೇಳಿಕೆಯನ್ನ ನೀಡಿದ್ದಾರೆ.

ಸದ್ಯ ಸೌತ್ ಮತ್ತು ಬಾಲಿವುಡ್‌ನಲ್ಲಿ ಬ್ಯುಸಿಯಿರುವ ನಟಿ ರಶ್ಮಿಕಾ  ಇತ್ತೀಚೆಗೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಸಂದರ್ಶನವೊಂದರಲ್ಲಿ ನಟಿ ತಮ್ಮ ಚೊಚ್ಚಲ ಸಿನಿಮಾದ ನಿರ್ಮಾಣ ಸಂಸ್ಥೆಯ ಹೆಸರು ಹೇಳಿಲ್ಲ ಎಂದು ಕನ್ನಡಿಗರ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬಳಿಕ ರಿಷಬ್ ಶೆಟ್ಟಿ ಕೂಡ ತಮ್ಮದೇ ಶೈಲಿಯಲ್ಲಿ ನಟಿಗೆ ಟಾಂಗ್ ಕೊಟ್ಟಿದ್ದರು. ನಂತರ ರಶ್ಮಿಕಾ ಬ್ಯಾನ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಇದೀಗ ವಿಷ್ಯವಾಗಿ ನಿರ್ದೇಶಕ ನಾಗಶೇಖರ್ ಕೂಡ ರಿಯಾಕ್ಟ್ ಮಾಡಿದ್ದಾರೆ.

`ಸಂಜು ವೆಡ್ಸ್ ಗೀತಾ’, `ಮೈನಾ; ಖ್ಯಾತಿಯ ನಾಗಶೇಖರ್ ತೆಲುಗಿನ ತಮ್ಮ ಮುಂದಿನ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ರಶ್ಮಿಕಾ ಬ್ಯಾನ್ ಮತ್ತು ಮೊದಲ ಚಿತ್ರದ ಅವಕಾಶದ ಬಗ್ಗೆ ನಿರ್ದೇಶಕ ನಾಗಶೇಖರ್ ಅವರಿಗೆ ಪ್ರಶ್ನೆ ಕೇಳಲಾಗಿದೆ. ಅವಕಾಶ ಕೊಟ್ಟವರನ್ನು ನೆನಪು ಇಟ್ಟುಕೊಳ್ಳಬೇಕು ಎಂದು ನಿರೀಕ್ಷೆ ಮಾಡುವುದೇ ತಪ್ಪು. ಅದನ್ನೆಲ್ಲಾ ನಿರೀಕ್ಷಿಸಬಾರದು ಎಂದಿದ್ದಾರೆ.

ಇದನ್ನೂ ಓದಿ:  

ಇನ್ನೂ ನನಗೆ ಈ ಬಗ್ಗೆ ಗೊತ್ತಿಲ್ಲ. ಒಂದು ವೇಳೆ ರಶ್ಮಿಕಾ ಅವರನ್ನು ಚಿತ್ರರಂಗ ಬ್ಯಾನ್ ಮಾಡಿದರೆ ಚಿತ್ರರಂಗಕ್ಕೆ ನಷ್ಟ ಎಂದಿದ್ದಾರೆ. ಒಬ್ಬ ಒಳ್ಳೆಯ ಕಲಾವಿದೆಯನ್ನ ಬ್ಯಾನ್ ಮಾಡುವುದು ಸರಿಯಲ್ಲ. ಉದಾಹರಣೆಗೆ ಮುಂದಿನ ದಿನಗಳಲ್ಲಿ ನನ್ನ ಕನ್ನಡದ ಸಿನಿಮಾಗೆ ರಶ್ಮಿಕಾ ರೀತಿಯ ನಟಿ ಬೇಕು ಎಂದುಕೊಳ್ಳುತ್ತೇವೆ. ನೀವು ಆಕೆಯನ್ನು ಬ್ಯಾನ್ ಮಾಡಿದರೆ, ಫಿಲ್ಮ್ ಮೇಕರ್ಸ್‌ಗೆ ತೊಂದರೆಯಾಗುತ್ತದೆ ಎಂದು ನಾಗಶೇಖರ್ ಮಾತನಾಡಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

13 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

14 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

14 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

14 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

14 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

14 hours ago