ಹೊಸದಿಲ್ಲಿ: ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿರುವ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಶ್ಯನ್ ಭಾಷೆಯ ಭಗವದ್ಗೀತೆ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.
ತಮ್ಮಿಬ್ಬರ ನಡುವಿನ ಮಾತುಕತೆ ವೇಳೆಯ ಭಾವಚಿತ್ರವನ್ನು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
“ಭಗವದ್ಗೀತೆಯ ಒಂದು ಪ್ರತಿಯನ್ನು ರಶ್ಯ ಅಧ್ಯಕ್ಷ ಪುಟಿನ್ ಅವರಿಗೆ ಉಡುಗೊರೆಯಾಗಿ ನೀಡಿದೆ. ಭಗವದ್ಗೀತೆಯಲ್ಲಿನ ಬೋಧನೆ ವಿಶ್ವಾದ್ಯಂತ ಇರುವ ಕೋಟ್ಯಂತರ ಮಂದಿಗೆ ಸ್ಫೂರ್ತಿದಾಯಕವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯ ಆಹ್ವಾನದ ಮೇರೆಗೆ 23ನೇ ಭಾರತ-ರಶ್ಯ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ಧಾರೆ. ಇಂದು ಉಭಯ ನಾಯಕರ ನಡುವೆ ನಡೆಯಲಿರುವ ದ್ವಿಪಕ್ಷೀಯ ಮಾತುಕತೆಯ ವೇಳೆ 10ಕ್ಕೂ ಹೆಚ್ಚು ಒಪ್ಪಂದಗಳು ಹಾಗೂ 15ಕ್ಕೂ ಹೆಚ್ಚು ಒಡಂಬಡಿಕೆ (MOU) ಪತ್ರಗಳಿಗೆ ಸಹಿ ಹಾಕಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…