ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಸಂಭವನೀಯ ಆಕ್ರಮಣದ ಭೀತಿ ಹೆಚ್ಚಿದೆ. ಹೀಗಾಗಿ ಆತಂಕವಿರುವ ಪ್ರದೇಶಗಳಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ಟಾಟಾ ಒಡೆತನದ ಏರ್ ಇಂಡಿಯಾ ಇಂದು ರಾತ್ರಿ ಉಕ್ರೇನ್ ತಲುಪಲಿದೆ.
ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ಭಾರತ ಸರ್ಕಾರ ಮುಂದಾಗಿದೆ. ಉಕ್ರೇನ್‌ನಲ್ಲಿ ನೆಲೆಸಿರುವ ಭಾರತೀಯರು ಸುರಕ್ಷಿತವಾಗಿ ಹಿಂದಿರುಗಲು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ.
ಏರ್ ಇಂಡಿಯಾದ ಎಐ-1946 ಮೊದಲ ವಿಶೇಷ ವಿಮಾನದಲ್ಲಿ ಭಾರತೀಯ ಪ್ರಜೆಗಳು ಇಂದು ರಾತ್ರಿ ತವರು ದೇಶಕ್ಕೆ ಮರಳಲಿದ್ದಾರೆ ಎಂದು ಏರ್‌ಲೈನ್ ಮೂಲಗಳು ತಿಳಿಸಿವೆ. ಏರ್ ಇಂಡಿಯಾ ಫೆರ್ರಿ ವಿಮಾನವು ಸೋಮವಾರ ಉಕ್ರೇನ್‌ನಿಂದ ಭಾರತೀಯರನ್ನು ವಾಪಸ್ ಕರೆತಂದಿತ್ತು. ಏರ್ ಇಂಡಿಯಾದ ಮೂರು ವಿಮಾನಗಳು ಈ ಕಾರ್ಯಾಚರಣೆಯಲ್ಲಿವೆ.
ಇದನ್ನೂ ಓದಿ :
ಏರ್ ಇಂಡಿಯಾದ ಮೂರು ವಿಮಾನಗಳು ಫೆ.22, 24 ಮತ್ತು 26ರಂದು ಭಾರತ ಮತ್ತು ಉಕ್ರೇನ್ ನಡುವೆ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿಸಲಾಗಿದೆ. ಉಕ್ರೇನ್‌ಗೆ ವಿಶೇಷ ಕಾರ್ಯಾಚರಣೆಯ ಭಾಗವಾಗಿ ದೆಹಲಿಯಿಂದ ಬೋಯಿಂಗ್ ಡ್ರೀಮ್‌ಲೈನರ್ ಎಐ-1947 ವಿಮಾನವು ಟೇಕ್ ಆಫ್ ಆಗಿದೆ. ಇದು 200ಕ್ಕೂ ಹೆಚ್ಚು ಆಸನಗಳ ಸಾಮರ್ಥ್ಯವನ್ನು ಹೊಂದಿದೆ.
ರಷ್ಯಾದೊಂದಿಗೆ ಉಕ್ರೇನ್ ಗಡಿಯಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಿಶೇಷ ಸಭೆಯಲ್ಲಿ ಪರಸ್ಪರ ಸೌಹಾರ್ದಯುತ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕಡೆಯವರು ಅತ್ಯಂತ ಸಂಯಮ ಮತ್ತು ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡಬೇಕು ಎಂದು ಬಲವಾಗಿ ಪ್ರತಿಪಾದಿಸಿತ್ತು.
ಇದನ್ನೂ ಓದಿ :
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…