ಕಲಬುರಗಿ: ಯುದ್ಧಪೀಡಿತ ರಷ್ಯಾದಲ್ಲಿ ಸಿಲುಕಿರುವ ಕಲಬುರಗಿ ಮೂಲದ ಮೂವರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.
ಕಲಬುರಗಿ ಜಿಲ್ಲೆಯ ಮೂವರು ಯುವಕರು ಯುದ್ಧಪೀಡಿತ ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುರಿತು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಕಲಬುರಗಿ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಕಲಬುರಗಿ ಜಿಲ್ಲೆಯ ಮೂವರು ಯುವಕರು ಹಾಗೂ ತೆಲಂಗಾಣದ ಒಬ್ಬ ಯುವಕನಿಗೆ ಉದ್ಯೋಗದ ಆಮಿಷವೊಡ್ಡಿ ಇದೀಗ ಅವರನ್ನು ಬಲವಂತವಾಗಿ ಉಕ್ರೇನ್ ವಿರುದ್ಧದ ಯುದ್ಧಕ್ಕೆ ತಳ್ಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಧ್ಯಮಗಳ ವರದಿ ಪ್ರಕಾರ ಕಳೆದ ಒಂದು ವರ್ಷದಲ್ಲಿ ಭಾರತದ ನೂರಕ್ಕೂ ಹೆಚ್ಚು ಯುವಕರನ್ನು ರಷ್ಯಾದ ಸೈನ್ಯದಲ್ಲಿ ಸಹಾಯಕರಾಗಿ ನೇಮಿಸಿಕೊಳ್ಳಲಾಗಿದೆ ಎಂಬ ಆಘಾತಕಾರಿ ವಿಷಯಗಳು ಬಿತ್ತರವಾಗುತ್ತಿದೆ.
ರಷ್ಯಾದಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಎಲ್ಲಾ ಭಾರತೀಯರು ಹಾಗೂ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಡಿಗೆ ಕರೆತರುವಂತೆ ಪತ್ರದ ಮೂಲಕ ಖರ್ಗೆವಿನಂತಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…