Featured

ರಸ್ತೆಗಳ ಬ್ಲಾಕ್‌ ಸ್ಪಾಟ್ ನಲ್ಲಿ ಅಪಘಾತವಾಗಿ ಜೀವಹಾನಿಯಾದಲ್ಲಿ ಅಧಿಕಾರಿಗಳ ವಿರುದ್ಧ ಪ್ರಕರಣ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ರಸ್ತೆಗಳ ಬ್ಲಾಕ್‌ ಸ್ಪಾಟ್ ನಲ್ಲಿ ಅಪಘಾತವಾಗಿ ಜೀವಹಾನಿಯಾದಲ್ಲಿ ಅಧಿಕಾರಿಗಳ ವಿರುದ್ಧ ಪ್ರಕರಣ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ರಸ್ತೆ ಬ್ಲಾಕ್ಸ್ಪಾಟ್ಗಳನ್ನು ಸಂಬಂಧಪಟ್ಟ ಹೆದ್ದಾರಿ ಇಲಾಖೆಗಳ ಅಧಿಕಾರಿಗಳು 15 ದಿನಗಳಲ್ಲಿ ತೆರವುಗೊಳಿಸಬೇಕು. 15 ದಿನದ ನಂತರ ಆ ಪ್ರದೇಶದಲ್ಲಿ ಅಪಘಾತ ಸಂಭವಿಸಿ ಜೀವಹಾನಿಯಾದಲ್ಲಿ ರಸ್ತೆಯನ್ನು ನಿರ್ಮಿಸಿ, ನಿರ್ವಹಿಸುತ್ತಿರುವ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಎ ರಲ್ಲಿ ಒಟ್ಟು 33 ಅಪಘಾತ ಸಂಭವಿಸುವ ಬ್ಲಾಕ್ಸ್ಪಾಟ್ಗಳನ್ನು ಗುರುತಿಸಿದ್ದು, ಈ ಪ್ರದೇಶದಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಿದ್ದು, ಇದುವರೆಗೆ ಅಗತ್ಯ ಕ್ರಮ ಕೈಗೊಳ್ಳದ ರಾಷ್ಟ್ರೀಯ ಹೆದ್ದಾರಿ ಇಲಾಖೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಇನ್ನು 15 ದಿನದಲ್ಲಿ ಈ ಎಲ್ಲಾ ಪ್ರದೇಶಗಳಲ್ಲಿ ಅಗತ್ಯ ದುರಸ್ಥಿ ಕಾರ್ಯ ಕೈಗೊಂಡು ವರದಿ ನೀಡಬೇಕು. ದುರಸ್ಥಿ ಮಾಡದೇ ಈ ಪ್ರದೇಶದಲ್ಲಿ ಅಪಘಾತ ಸಂಭವಿಸಿ, ಜೀವ ಹಾನಿಯಾದಲ್ಲಿ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ, ಸಾವಿಗೆ ಕಾರಣವಾದ ಕುರಿತು ಪ್ರಕರಣ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಬ್ಲಾಕ್ಸ್ಪಾಟ್ಗಳ ದುರಸ್ಥಿ ಮಾಡುವ ಕುರಿತಂತೆ ರಾಷ್ಟ್ರೀಯ ಹೆದ್ದಾರಿಯ ಯೋಜನಾ ನಿರ್ದೇಶಕರಿಗೆ ಮತ್ತು ಪ್ರಾದೇಶಿಕ ನಿರ್ದೇಶಕರುಗಳಿಗೂ ಸಹ ಪತ್ರ ಬರೆಯುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯೊಳಗಿನ ಇತರೆ ರಸ್ತೆಗಳಲ್ಲಿಯೂ ಇರುವ ಬ್ಲಾಕ್ಸ್ಪಾಟ್ಗಳಲ್ಲಿ ದುರಸ್ಥಿ ಕಾರ್ಯ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಧಿಕಾರಿಗಳ ನಿರ್ಲಕ್ಷದಿಂದ ಅಪಘಾತಗಳು ಸಂಭವಿಸಿ ಜೀವ ಹಾನಿಯಾದರೆ, ಮರಳಿ ವ್ಯಕ್ತಿಯ ಜೀವ ತರಲು ಸಾಧ್ಯವೇ ಎಂದು ಪ್ರಶ್ನಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಇತ್ತೀಚೆಗೆ ಸಂತೆಕಟ್ಟೆ ಬಳಿ ಸಂಭವಿಸಿದ ಅಪಘಾತದಲ್ಲಿ ಬಲಿಯಾದ ಪೊಲೀಸ್ ಅಧಿಕಾರಿ ಮತ್ತು ಮಗಳ ಸಾವಿನ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದರು.

ಮಣಿಪಾಲದ ಟೈಗರ್ ಸರ್ಕಲ್ ಬಳಿ ಅಳವಡಿಸಿರುವ ಸಿಗ್ನಲ್ನಿಂದ ರಸ್ತೆಯ ಬಲ ಮತ್ತು ಎಡ ಬದಿಯ ಕ್ರಾಸ್ಗಳಿಂದ ಬರುವ ವಾಹನ ಸವಾರರಿಗೆ ಸಿಗ್ನಲ್ ಇಲ್ಲದೇ ಇರುವುದರಿಂದ ತೀವ್ರ ತೊಂದರೆಯಾಗುತ್ತಿದ್ದು, ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದರು.

ಮಣಿಪಾಲದ ಈಶ್ವರ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಮೀಸಲಿಟ್ಟ ಪ್ರದೇಶದಲ್ಲಿರುವ ರಿಕ್ಷಾ ನಿಲ್ದಾಣ ತೆರವುಗೊಳಿಸುವ ಬಗ್ಗೆ ಬಂದಿರುವ ದೂರಿನ ಕುರಿತಂತೆ ನಗರಸಭೆ, ಆರ್.ಟಿ.ಓ, ಪೋಲೀಸ್ ಮತ್ತು ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಿಳಿಸಿದರು.

ಲಕ್ಷ್ಮೀಂದ್ರ ನಗರದ ಬಳಿ ಯೂಟರ್ನ್ ನಿರ್ಮಾಣದ ಅಗತ್ಯತೆ ಬಗ್ಗೆ ಎಸ್ಪಿ ವಿಷ್ಣುವರ್ಧನ್ ತಿಳಿಸಿದರು. ಕೂಡಲೇ ಇಲ್ಲಿ ಯೂಟರ್ನ್ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿಯಿಂದ ಶಿರೂರುವರೆಗೆ ಅಗತ್ಯವಿರುವೆಡೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಎಸ್ಪಿ ತಿಳಿಸಿದರು.

ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ 2021-22 ನೇ ಸಾಲಿನಲ್ಲಿ 18754 ವಾಹನ ತಪಾಸಣೆ ಮಾಡಿ, 2731 ಪ್ರಕರಣ ದಾಖಲಿಸಿ, 192 ವಾಹನ ಮುಟ್ಟುಗೂಲು ಹಾಕಿ, ತೆರಿಗೆ 79,81,250 ರೂ. ಹಾಗೂ ದಂಡ, 105,77,020 ರೂ. ಸೇರಿದಂತೆ ಒಟ್ಟು 1,85,58.270 ರೂ. ಅನ್ನು ವಸೂಲು ಮಾಡಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ, ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago