ರಸ್ತೆಯಲ್ಲಿ ಕುಸಿದುಬಿದ್ದ ಅನಾಥ ವೃದ್ಧರೊಬ್ಬರಿಗೆ ನೀರು ಆಹಾರ ನೀಡಿ ಉಪಚರಿಸಿದ ಮಂಗಳೂರಿನ ಮಹಿಳಾ ಕಾನ್ಸ್ ಟೇಬಲ್
ಮಂಗಳೂರು, : ಬಿಸಿಲಿನ ಝಳ ಹಾಗೂ ಹಸಿವಿನಿಂದ ಬಸವಳಿದು ರಸ್ತೆ ಬದಿ ಬಿದ್ದ ಅನಾಥ ವೃದ್ದರೊಬ್ಬರಿಗೆ ನೀರು ಆಹಾರ ನೀಡಿ ಉಪಚರಿಸಿ ಮಾನವಿಯತೆ ಮೆರೆದ ಮಂಗಳೂರಿನ ಸಂಚಾರಿ ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಸಾರ್ವಜನಿಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ.
ಸುಮಾರು 60 – 65 ವರ್ಷದ ವೃದ್ಧರೊಬ್ಬರು ಜಪ್ಪಿನಮೊಗರು ನೇತ್ರಾವತಿ ಸೇತುವೆಯ ಮೇಲೆ ಹಸಿವಿನಿಂದ ದಾರಿ ಕಾಣದೆ ಕಂಗಲಾಗಿ ಬಿದ್ದಿದ್ದರು. ತಕ್ಷಣ ಇದನ್ನು ಗಮನಿಸಿದ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಭಾಗ್ಯಶ್ರೀ ವೃದ್ಧ ವ್ಯಕ್ತಿಯ ಸಹಾಯಕ್ಕೆ ಬಂದಿದ್ದಾರೆ. ಮಾತ್ರವಲ್ಲ, ಭಾಗ್ಯಶ್ರೀ ವೃದ್ಧ ವ್ಯಕ್ತಿಗೆ ಕುಡಿಯುಲು ನೀರು, ತಿನ್ನಲು ಆಹಾರ ನೀಡಿ ಉಪಚರಿಸಿದ್ದಾರೆ.
ನೀರು ಕುಡಿದು ಹಣ್ಣು ತಿಂದ ಬಳಿಕ ಆ ವ್ಯಕ್ತಿ ಸ್ವಲ್ಪ ಸುಧಾರಿಸಿಕೊಂಡಿದ್ದಾರೆ.ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರತಿಕ್ರೀಯಿಸಿರುವ ಭಾಗ್ಯಶ್ರೀ ಮನುಷ್ಯರಾಗಿ ಮನುಷ್ಯರಿಗೆ ಸಹಾಯ ಮಾಡುವುದು ನಮ್ಮ ಧರ್ಮ.ಇದರಲ್ಲಿ ಹೆಚ್ಚೇನೂ ಇಲ್ಲ ಎಂದು ಹೇಳುವ ಮೂಲಕ ತನ್ನ ಸರಳತೆ ಮತ್ತು ಮಾನವೀಯ ಪ್ರಜ್ಞೆಯನ್ನು ಮೆರೆದಿದ್ದಾರೆ.
ಭಾಗ್ಯಶ್ರೀ ಅವರ ಈ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…