Featured

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಬಚ್ಪನ್ ಕಾ ಪ್ಯಾರ್’ ಖ್ಯಾತಿಯ ಸಹದೇವ್ ದಿರ್ಡೋ – Vishwanews24

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಬಚ್ಪನ್ ಕಾ ಪ್ಯಾರ್’ ಖ್ಯಾತಿಯ ಸಹದೇವ್ ದಿರ್ಡೋ ; ಗಂಭೀರ ಸ್ಥಿತಿಯಲ್ಲಿ ವೈರಲ್ ಹುಡುಗ – Vishwanews24

ಬಚ್‌ಪನ್ ಕಾ ಪ್ಯಾರ್ ಹಾಡಿನ ಮೂಲಕ ರಾತ್ರೋ ರಾತ್ರಿ ವೈರಲ್ ಆದ ಬಾಲಕ ಸಹದೇವ್ ದಿರ್ಡೋ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಚ್‌ಪನ್ ಕಾ ಪ್ಯಾರ್ ಮೇರ ಭೂಲ್ ನಯಿ ಜಾನಾ ಎಂದು ಹಾಡಿದ್ದ ಹುಡುಗನ ವಿಡಿಯೋ ಇನ್‌ಸ್ಟಗ್ರಾಮ್ ಸೇರಿ ಸೋಷಿಯಲ್ ಮಿಡಿಯಾ ಫ್ಲಾಟ್‌ಫಾರ್ಮ್‌ನಲ್ಲಿ ಟ್ರೆಂಡ್ ಆಗಿತ್ತು. ಇದೀಗ ಅಪಘಾತದಲ್ಲಿ ಬಾಲಕನ ತಲೆಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಈ ಕಾರಣಗಳಿಂದಾಗಿ ಬಾಲಕನನ್ನು ಸುಕ್ಮಾದ ಜಿಲ್ಲಾ ಆಸ್ಪತ್ರೆಯಿಂದ ಜಗ್ದಲ್‌ಪುರದ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ.

ವರದಿಗಳ ಪ್ರಕಾರ ಸಚ್‌ದೇವ್ ಕುಟುಂಬಸ್ಥರೊಂದಿಗೆ ಸುಕ್ಮಾಗೆ ಬರುತ್ತಿದ್ದ. ಈ ಸಂದರ್ಭ ಬೈಕ್ ಕ್ರಾಶ್ ಆಗಿದೆ. ಇದರಿಂದ ಸಚ್‌ದೇವ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಸುಕ್ಮಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಬಾಲಕನನ್ನು ವೈದ್ಯಕೀಯ ಕಾಲೇಜಿಗೆ ಶಿಫ್ಟ್ ಮಾಡಲಾಗಿದೆ.

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಈ ವಿಚಾರದಲ್ಲಿ ಸಹಾಯ ಮಾಡಿದ್ದಾರೆ. ಸಚ್‌ದೇವ್ ದಿರ್ಡೋ ಅವರ ಅಪಘಾತದ ಸುದ್ದಿಯ ಬಗ್ಗೆ ದುಃಖವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಶ್ಬಾಘೇಲ್ ಅವರು ಜಿಲ್ಲಾಧಿಕಾರಿ ಶ್ರೀ ವಿನೀತ್ ನಂದನ್ವಾರ್ ಸುಕ್ಮಾ ಡಿಸ್ಟ್ ಅವರಿಗೆ ಶೀಘ್ರದಲ್ಲಿಯೇ ಉತ್ತಮ ವೈದ್ಯಕೀಯ ನೆರವು ನೀಡುವಂತೆ ಸೂಚಿಸಿದ್ದಾರೆ ಎಂದು ಛತ್ತೀಸ್ಗಢದ ಸಿಎಂಒ ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

8 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

8 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

8 hours ago