Featured

ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ದಾರುಣ ಸಾವು – Vishwanews24

ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ದಾರುಣ ಸಾವು – Vishwanews24

ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಸೂಪರ್ ಸ್ಟಾರ್ ರಿಯಾಲಿಟಿ ಶೋನ ಸ್ಪರ್ಧಿ ಸಮನ್ವಿ ಸಾವಿಗೆ ಲಾರಿ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದ ಲಾರಿ ಚಾಲಕ ಮಂಚೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಸಮನ್ವಿ ಮೃತದೇಹ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಿದ್ದು, ಪರೀಕ್ಷೆಯ ಬಳಿಕ ಆಸ್ಪತ್ರೆ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರವಾಗಲಿದೆ.

ಕನಕಪುರ ರಸ್ತೆಯ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿರುವ ಅಮೃತ ನಾಯ್ಡು ಗುರುವಾರ ಸಂಜೆ ಹೋಂಡಾ ಆಕ್ಟಿವಾದಲ್ಲಿ ಮಗಳೊಂದಿಗೆ ಮನೆಯಿಂದ ಹೊರಗಡೆ ಹೊರಟಿದ್ದರು. ವಾಜರಹಳ್ಳಿ ಮೆಟ್ರೋ ಸ್ಟೇಶನ್ ಬಳಿ ಆಕ್ಟಿವಾ ಪಾರ್ಕ್ ಮಾಡಿ ಇಬ್ಬರೂ ಗಾಯತ್ರಿ ನಗರಕ್ಕೆ ಹೋಗಬೇಕಿತ್ತು. ಇದನ್ನೂ ಓದಿ: ನಟಿ ಅಮೃತಾ ನಾಯ್ಡು ಬಾಳಲ್ಲಿ ಪದೇ ಪದೇ ವಿಧಿಯಾಟ

ಮೆಟ್ರೋ ನಿಲ್ದಾಣಕ್ಕೆ 100 ಮೀ. ದೂರ ಇರುವಂತೆ ತಾಯಿ ಮಗಳು ಟಾಟಾ ಸುಮೋ ಹಾಗೂ ಲಾರಿ ಮಧ್ಯೆ ಸಿಲುಕಿದ್ದರು. ಟಿಪ್ಪರ್ ಲಾರಿ ಚಾಲಕ ಎಡಕ್ಕೆ ಗಾಡಿಯನ್ನು ತಿರುಗಿಸಿದ್ದಾನೆ. ಪರಿಣಾಮ ಎಡಭಾಗದ ಬಂಪರ್ ಡಿಕ್ಕಿ ಹೊಡೆದಿದ್ದರಿಂದ ಅಮೃತ ನಾಯ್ಡು ಮತ್ತು ಮನ್ವಿ ರಸ್ತೆಗೆ ಬಿದ್ದಿದ್ದಾರೆ. ಮಾನ್ವಿಯ ಸೊಂಟಕ್ಕೆ ಲಾರಿ ಬಂಪರ್ ಬಲವಾಗಿ ಗುದ್ದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾರ್ಗ ಮಧ್ಯೆ ಸಮನ್ವಿ ಮೃತಪಟ್ಟಿದ್ದಳು. ಕುಮಾರ ಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago