Featured

ರಸ್ತೆ ಅಪಘಾತ : ಆರ್‌ಎಸ್‌ಎಸ್‌ ಹಿರಿಯ ಕಾರ್ಯಕರ್ತ ಸಾವು -Vishwanews24

ರಸ್ತೆ ಅಪಘಾತ : ಆರ್‌ಎಸ್‌ಎಸ್‌ ಹಿರಿಯ ಕಾರ್ಯಕರ್ತ ಸಾವು -Vishwanews24

ಬಂಟ್ವಾಳ,: ಪುತ್ತೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡರೊಬ್ಬರು ಮೃತಪಟ್ಟಿದ್ದಾರೆ.

ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿದ್ದ ವೆಂಕಟರಮಣ ಹೊಳ್ಳ (60) ಮೃತಪಟ್ಟವರು.

ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಕಡಬ ಬಳಿಯ ಪೋಳ್ಯದಲ್ಲಿ ಬೈಕ್‌ ರಸ್ತೆ ವಿಭಜಕಕ್ಕೆ ಢಿಕ್ಕೆ ಹೊಡೆದಿದೆ ಎಂದು ತಿಳಿದು ಬಂದಿದೆ.

ವೆಂಕಟ್ರಮಣ ಹೊಳ್ಳ ಅವರ ಮ್ರತ ದೇಹ ಘಟನೆಯ ತುಸು ದೂರ ಬಿದ್ದಿದ್ದು ಅವರ ತಲೆ ಜಜ್ಜಿ ಹೋಗಿದೆ. ವೆಂಕಟ್ರಮಣ ಹೊಳ್ಳ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಬೇರೆ ಯಾವುದೋ ವಾಹನ ಡಿಕ್ಕಿಯಾಗಿ ಹೋಗಿರಬಹುದೇ ಎಂಬ ಶಂಕೆಯು ವ್ಯಕ್ತವಾಗುತ್ತಿದೆ. ಪುತ್ತೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಆತ್ಮನಿರ್ಭರರಾಗುವ ಉದ್ಯೋಗ ತರಬೇತಿ ಆಯೋಜಿಸುವ ಮೂಲಕ ವೆಂಕಟರಮಣ ಹೊಳ್ಳ ಗಮನ ಸೆಳೆದಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago