ಭಾವಿ ಪತಿಯೊಂದಿಗೆ ಹಿಮಾಚಲ ಪ್ರದೇಶದ ಪ್ರವಾಸದಲ್ಲಿದ್ದ ಖ್ಯಾತ ಕಿರುತೆರೆ ನಟಿ ವೈಭವಿ ಉಪಾಧ್ಯಾಯ ನಿಧನರಾಗಿದ್ದಾರೆ. ಪ್ರವಾಸ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಪರಿಣಾಮ ಅವರು ಕೊನೆಯುಸಿರೆಳೆದಿದ್ದಾರೆ. 32 ವಯಸ್ಸಿನ ವೈಭವಿ ಕಿರುತೆರೆ ಫೇಮಸ್ ನಟಿ. ಅಲ್ಲದೇ, ಇತ್ತೀಚೆಗೆ ಅವರು ಸಿನಿಮಾಗಳಲ್ಲೂ ನಟಿಸುತ್ತಿದ್ದರು.
ಹಿಂದಿಯ ಜನಪ್ರಿಯ ಕಿರುತೆರೆ ಶೋಗಳಾದ ‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ಸೇರಿದಂತೆ ಸಾಕಷ್ಟು ಶೋಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ನಟಿಸಿದ ಹೆಗ್ಗಳಿಕೆ ಇವರದ್ದು. ಹಿಂದಿ ಕಿರುತೆರೆಯಲ್ಲಿ ಜಾಸ್ಮೀನ್ ಎಂದೇ ಪರಿಚಿತರು. ಇದು ಅವರ ಪಾತ್ರದ ಹೆಸರಾಗಿತ್ತು. ‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ನಿರ್ಮಾಪಕ ಈ ಸುದ್ದಿಯನ್ನು ಖಚಿತ ಪಡಿಸುತ್ತಿದ್ದಂತೆಯೇ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ನಿನ್ನೆ ಈ ಘಟನೆ ಸಂಭವಿಸಿದ್ದು, ನಂತರ ಅವರ ಮೃತದೇಹವನ್ನು ಮುಂಬೈಗೆ ತರಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಇದೆ. ವೈಭವಿ ನಿಧನಕ್ಕೆ ಹಿಂದಿ ಕಿರುತೆರೆ ಅನೇಕರು ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೇ ಇತ್ತೀಚೆಗಷ್ಟೇ ಅವರು ದೀಪಿಕಾ ಪಡುಕೋಣೆ ನಟನೆ ಛಪಾಕ್ ಹಾಗೂ ತಿಮಿರ್ ಎನ್ನುವ ಚಿತ್ರದಲ್ಲೂ ನಟಿಸಿದ್ದರು. ಇದನ್ನೂ ಓದಿ:‘ರಾನಿ’ ಸಿನಿಮಾ ಸೆಟ್ ನಲ್ಲಿ ನಿರ್ದೇಶಕರ ಹುಟ್ಟುಹಬ್ಬ
‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ನಿರ್ದೇಶಕ ದೆವೆನ್ ಭೊಜನಿ ಸಂತಾಪ ವ್ಯಕ್ತ ಪಡಿಸಿದ್ದು, ‘ಶಾಕಿಂಗ್, ಅದ್ಭುತ ನಟಿ ಹಾಗೂ ಸ್ನೇಹಿತೆ ಕೆಲವೇ ಗಂಟೆಗಳ ಹಿಂದಷ್ಟೇ ಕಾರು ಅಪಘಾತವಾಗಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೊ’ ಎಂದು ಬರೆದುಕೊಂಡಿದ್ದಾರೆ. ನಟಿ ರೂಪಾ ಗಂಗೂಲಿ ಕೂಡ ಟ್ವೀಟ್ ಮಾಡಿ ‘ಇದು ಘೋರ ಅನ್ಯಾಯ. ನಂಬೋಕೆ ಆಗುತ್ತಿಲ್ಲ’ ಎಂದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…