Featured

ರಸ್ತೆ ಅಪಘಾತ : ಕಿರುತೆರೆ ಖ್ಯಾತ ನಟಿ ವೈಭವಿ ಉಪಾಧ್ಯಾಯ ದುರ್ಮರಣ – Vishwanews24

ರಸ್ತೆ ಅಪಘಾತ : ಕಿರುತೆರೆ ಖ್ಯಾತ ನಟಿ ವೈಭವಿ ಉಪಾಧ್ಯಾಯ ದುರ್ಮರಣ

ಭಾವಿ ಪತಿಯೊಂದಿಗೆ ಹಿಮಾಚಲ ಪ್ರದೇಶದ  ಪ್ರವಾಸದಲ್ಲಿದ್ದ ಖ್ಯಾತ ಕಿರುತೆರೆ ನಟಿ ವೈಭವಿ ಉಪಾಧ್ಯಾಯ ನಿಧನರಾಗಿದ್ದಾರೆ. ಪ್ರವಾಸ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಪರಿಣಾಮ ಅವರು ಕೊನೆಯುಸಿರೆಳೆದಿದ್ದಾರೆ. 32 ವಯಸ್ಸಿನ ವೈಭವಿ ಕಿರುತೆರೆ ಫೇಮಸ್ ನಟಿ. ಅಲ್ಲದೇ, ಇತ್ತೀಚೆಗೆ ಅವರು ಸಿನಿಮಾಗಳಲ್ಲೂ ನಟಿಸುತ್ತಿದ್ದರು.

ಹಿಂದಿಯ ಜನಪ್ರಿಯ ಕಿರುತೆರೆ ಶೋಗಳಾದ ‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ಸೇರಿದಂತೆ ಸಾಕಷ್ಟು ಶೋಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ನಟಿಸಿದ ಹೆಗ್ಗಳಿಕೆ ಇವರದ್ದು. ಹಿಂದಿ ಕಿರುತೆರೆಯಲ್ಲಿ ಜಾಸ್ಮೀನ್ ಎಂದೇ ಪರಿಚಿತರು. ಇದು ಅವರ ಪಾತ್ರದ ಹೆಸರಾಗಿತ್ತು. ‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ನಿರ್ಮಾಪಕ ಈ ಸುದ್ದಿಯನ್ನು ಖಚಿತ ಪಡಿಸುತ್ತಿದ್ದಂತೆಯೇ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ನಿನ್ನೆ ಈ ಘಟನೆ ಸಂಭವಿಸಿದ್ದು, ನಂತರ ಅವರ ಮೃತದೇಹವನ್ನು ಮುಂಬೈಗೆ ತರಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಇದೆ. ವೈಭವಿ ನಿಧನಕ್ಕೆ ಹಿಂದಿ ಕಿರುತೆರೆ ಅನೇಕರು ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೇ ಇತ್ತೀಚೆಗಷ್ಟೇ ಅವರು ದೀಪಿಕಾ ಪಡುಕೋಣೆ ನಟನೆ ಛಪಾಕ್ ಹಾಗೂ ತಿಮಿರ್ ಎನ್ನುವ ಚಿತ್ರದಲ್ಲೂ ನಟಿಸಿದ್ದರು. ಇದನ್ನೂ ಓದಿ:‘ರಾನಿ’ ಸಿನಿಮಾ ಸೆಟ್ ನಲ್ಲಿ ನಿರ್ದೇಶಕರ ಹುಟ್ಟುಹಬ್ಬ

‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ನಿರ್ದೇಶಕ ದೆವೆನ್ ಭೊಜನಿ ಸಂತಾಪ ವ್ಯಕ್ತ ಪಡಿಸಿದ್ದು, ‘ಶಾಕಿಂಗ್, ಅದ್ಭುತ ನಟಿ ಹಾಗೂ ಸ್ನೇಹಿತೆ ಕೆಲವೇ ಗಂಟೆಗಳ ಹಿಂದಷ್ಟೇ ಕಾರು ಅಪಘಾತವಾಗಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೊ’ ಎಂದು ಬರೆದುಕೊಂಡಿದ್ದಾರೆ. ನಟಿ ರೂಪಾ ಗಂಗೂಲಿ ಕೂಡ ಟ್ವೀಟ್ ಮಾಡಿ ‘ಇದು ಘೋರ ಅನ್ಯಾಯ. ನಂಬೋಕೆ ಆಗುತ್ತಿಲ್ಲ’ ಎಂದಿದ್ದಾರೆ.

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

27 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

44 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

58 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago