Featured

ರಸ್ತೆ ಅಭಿವೃದ್ದಿಯ ನೆಪದಲ್ಲಿ ಮರಗಳನ್ನು ಕಡಿಯಬಾರದು : ಕಸ್ತೂರಿ ಕರ್ನಾಟಕ ಜನಪರ ವೇದಿಕೆ -Vishwanews24

ಮದ್ದೂರು: ಸಾಲುಮರದ ತಿಮ್ಮಕ್ಕ ಕೋಲಾರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಹಲಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳೆಸಿರುವ ಮರಗಳನ್ನು ಯಾವುದೇ ಕಾರಣಕ್ಕೂ ರಸ್ತೆ ಅಭಿವೃದ್ದಿಯ ನೆಪದಲ್ಲಿ ಮರಗಳನ್ನು ಕಡಿಯಬಾರದು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮರವನ್ನು ಅಪ್ಪಿಕೊಂಡು ವಿನೂತನ ಚಳವಳಿ ಮಾಡಿದರು.

ಸಾಲು ಮರದ ತಿಮ್ಮಕ್ಕನವರು ತಮ್ಮ ಮಕ್ಕಳಂತೆ ಹೆದ್ದಾರಿಯಲ್ಲಿ 274 ಮರಗಳನ್ನು ಕಷ್ಟಪಟ್ಟು ಬೆಳೆಸಿದ್ದಾರೆ. ರಸ್ತೆಗಳ ಅಭಿವೃದ್ಧಿಯ ನೆಪದಲ್ಲಿ ಮರಗಳನ್ನು ಕಡಿಯಬಾರದು ಎಂದು ಒತ್ತಾಯ ಮಾಡಿದರು.

ಈ ಕೂಡಲೇ ಸಿಎಂ ಕುಮಾರಸ್ವಾಮಿ ಅವರ ಆದೇಶದಂತೆ ಮರ ಕಡಿಯುವ ಉದ್ದೇಶ ಕೈ ಬಿಟ್ಟು ಪರ್ಯಾಯ ವ್ಯವಸ್ಥೆ ಮಾಡಲಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಟ್ಟಣದ ಪುರಸಭೆಯ ಅಧಿಕಾರಿಗಳು ಒಳಚರಂಡಿ ನೀರನ್ನು ಶಿಂಷಾನದಿಗೆ ಹಾಗೂ ಕೆಮ್ಮಣ್ಣುನಾಲೆಗೆ ಹರಿಸುತ್ತಿದ್ದಾರೆ. ಇದರಿಂದ ನೀರು ಕಲುಷಿತಗೊಳ್ಳುತ್ತಿದ್ದು. ಈ ನೀರನ್ನು ಕುಡಿಯಲು ಬಳಕೆ ಮಾಡುವ ಪ್ರಾಣಿ, ಪಕ್ಷಿಗಳಿಗೆ ಹಾಗೂ ದೈನಂದಿನ ಕಾರ್ಯಕ್ಕೆ ಬಳಸುವ ಜನರಿಗೆ ರೋಗ ರುಜಿನಗಳು ಬರುತ್ತಿದೆ. ಈ ಬಗ್ಗೆ ಪುರಸಭಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎಂದು ಒತ್ತಾಯ ಮಾಡಿದರು.

ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ಉಪಾಧ್ಯಕ್ಷ ಯರಗನಹಳ್ಳಿ ಮಹಲಿಂಗು, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಮುಖಂಡರಾದ ಉಮೇಶ್, ವೀರಪ್ಪ, ಶೀನಪ್ಪ, ಮಿಲ್ಷ್ಟಿಕುಮಾರ್, ಜಗದೀಶ್, ಸಾಗರ್, ಕುದರಗುಂಡಿ ನಾಗರಾಜು, ಜವನೇಗೌಡ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago