ಬೆಂಗಳೂರು: ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ತಾಯಿ ಸಂಗೀತಾ (37), ಮಗ ಪಾರ್ಥ (8) ಮೃತ ದುರ್ದೈವಿಗಳು. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡ್ತಿದ್ದರು. ಇಬ್ಬರು ಮಕ್ಕಳಿದ್ದು, ಅದೇ ಶಾಲೆಗೆ ಸೇರಿಸಿದ್ದರು. ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.
ಇಂದು (ಜ.19) ಬೆಳಿಗ್ಗೆ 6:30ರ ಸುಮಾರಿಗೆ ಮಗನೊಂದಿಗೆ ಶಾಲೆಗೆ ಕೆಲಸಕ್ಕೆ ತೆರಳ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ಖಾಸಗಿ ಕಾಲೇಜಿನ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ತಾಯಿ-ಮಗ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಶೋಕ ನಗರ ಪೊಲೀಸ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನೂ ಅಪಘಾತವೆಸಗಿ ಬಸ್ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ತಲೆ ಮರೆಸಿಕೊಂಡಿರುವ ಚಾಲಕ ಸುನೀಲ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…