ರಸ್ತೆ ಬದಿ ನಿಂತಿದ್ದ ಜನರ ಮೇಲೆ ಟ್ಯಾಂಕರ್ ಹರಿದು ಮೂವರ ಸಾವು

Featured, ಜಿಲ್ಲೆ

ಕಲಬುರಗಿ: ರಸ್ತೆ ಪಕ್ಕದಲ್ಲಿಯೇ ನಿಂತಿದ್ದ ಜನರ ಮೇಲೆ ಲಾರಿಯೊಂದು ಹರಿದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಅಡ್ಡಾದಿಡ್ಡಿಯಾಗಿ ಚಲಿಸಿ ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ವಿಜಯಪುರದ ಸಿಂದಗಿ ತಾಲೂಕಿನ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳಲ್ಲಿ ಓರ್ವನ ಎಡರೂ ಕಾಲುಗಳು ತುಂಡಾಗಿವೆ ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ನೆಲೋಗಿ ಠಾಣೆ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.