ಕಲಬುರಗಿ: ರಸ್ತೆ ಪಕ್ಕದಲ್ಲಿಯೇ ನಿಂತಿದ್ದ ಜನರ ಮೇಲೆ ಲಾರಿಯೊಂದು ಹರಿದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಅಡ್ಡಾದಿಡ್ಡಿಯಾಗಿ ಚಲಿಸಿ ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ವಿಜಯಪುರದ ಸಿಂದಗಿ ತಾಲೂಕಿನ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳಲ್ಲಿ ಓರ್ವನ ಎಡರೂ ಕಾಲುಗಳು ತುಂಡಾಗಿವೆ ಎನ್ನಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ನೆಲೋಗಿ ಠಾಣೆ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…