Featured

ರಾಕಿಂಗ್ ಸ್ಟಾರ್ ಯಶ್ ಕೊಲೆಗೆ ಸಂಚು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಪೋಟಕ ಮಾಹಿತಿ  ಲಭ್ಯವಾಗಿದೆ.

ಕುಖ್ಯಾತ ರೌಡಿ ಸೈಕಲ್ ರವಿಯೇ ನಟ ಯಶ್ ಹತ್ಯೆಗೆ ಸಂಚು ಮಾಡಿದ್ದ. ಪೊಲೀಸರ ವಿಚಾರಣೆ ವೇಳೆ 2 ವರ್ಷಗಳ ಹಿಂದೆಯೇ ನಟ ಯಶ್ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು ಎಂಬ ಆಘಾತ ಸುದ್ದಿಯನ್ನು ಬಾಯಿಬಿಟ್ಟಿದ್ದಾನೆ.

2016 ರಲ್ಲಿ ಬರ್ತ್ ಡೇ ಕಾರ್ಯಕ್ರಮಕ್ಕೆಂದು ಕನಕಪುರ ಫಾರ್ಮ್ ಹೌಸ್‍ ಗೆ ಹೋಗಿದ್ದರು. ಅಲ್ಲಿ ಸೈಕಲ್ ರವಿ ಹಾಗೂ ಕೋದಂಡ ಸ್ಕೆಚ್ ಯಶ್ ಕೊಲೆ ಮಾಡಲು  ಮಾಡಿದ್ದರು. ಕೋದಂಡನ ಮೂಲಕ ಯಶ್ ಅವರನ್ನು ಕೊಲ್ಲಲು ಸ್ಕೆಚ್ ಹಾಕಲಾಗಿತ್ತು. ಸ್ಕೆಚ್ ರೀತಿಯಲ್ಲಿ ಕುಡಿದ ಮತ್ತಿನಲ್ಲಿಯೇ ಯಶ್ ಕಾರಿನ ಮೇಲೆ ಪುಡಿ ರೌಡಿಗಳು ಕಲ್ಲು ತೂರಾಟ ಮಾಡಿದ್ದರು. ಆದರೆ ಅಂದು ಯಶ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.

ಅಂದು ಯಶ್ ಹತ್ಯೆಗೆ ಮೊತ್ತೊಬ್ಬ ನಟನ ಕೈವಾಡ ಇದೆ ಎಂದು ಆರೋಪ ಕೇಳಿಬಂದಿದೆ. ಆದರೆ ನಟನ ಸಂಚಿನ ಬಗ್ಗೆಯೂ ಪೊಲೀಸರು ತೀವ್ರ ತನಿಖೆ ಮಾಡುತ್ತಿದ್ದಾರೆ. ಸದ್ಯಕ್ಕೆ ತನಿಖೆಯ ಯಾವುದೇ ಮಾಹಿತಿಯನ್ನು ಪೊಲೀಸರು ಬಹಿರಂಗ ಪಡಿಸುತ್ತಿಲ್ಲ.

ಕೋದಂಡ ಯಾರು? ಸದ್ಯಕ್ಕೆ ಕೋದಂಡ ಎಲ್ಲಿದ್ದಾನೆ ಎಂಬ ಸುಳಿಯೂ ಸಿಗುತ್ತಿಲ್ಲ. ಅವನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಕೋದಂಡ ಹಲವು ಪ್ರಕರಣಗಲ್ಲಿ ಬೇಕಾಗಿರುವ ಆರೋಪಿಯಾಗಿದ್ದು, ಇದುವರೆಗೂ ಪೊಲೀಸರ ಬಲೆಗೆ ಬಿದ್ದಿಲ್ಲ. ಕೋದಂಡ ಮತ್ತು ಸೈಕಲ್ ರವಿ ಇಬ್ಬರು ರೌಡಿಗಳಾಗಿದ್ದು, ವಿರೋಧಿಗಳಾಗಿದ್ದರು. ಆದರೆ ಒಬ್ಬರನ್ನು ಮುಗಿಸುವ ಸಲುವಾಗಿ ಇಬ್ಬರು ರಾಜಿ ಮಾಡಿಕೊಂಡಿದ್ದರು.

ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದ ಹಿನ್ನೆಲೆಯಲ್ಲಿ ನಿರ್ಮಾಪಕ ಜಯಣ್ಣ ಅವರ ಜೊತೆ ಹೋಗಿ ಯಶ್ ಕಮಿಷನರ್ ಕಚೇರಿಗೆ ಹೋಗಿ ಯಶ್ ಮೌಖಿಕ ದೂರು ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ದೂರಿನ ಆಧಾರದ ಮೇಲೆ ಮೈಸೂರು ಕರ್ನಾಟಕ ಭಾಗದಲ್ಲಿ ಬೆಂಗಳೂರಿನ ಕೆಲವು ರೌಡಿಗಳನ್ನು ವಶಕ್ಕೆ ಪಡೆದ ವಿಚಾರಣೆ ಮಾಡಿದ್ದು, ಜೈಲಿಗೂ ಕಳುಹಿಸಿದ್ದರು.

ಹತ್ಯೆಯ ಸಂಚಿನ ಪ್ರಕರಣ ಬೆಳಕಿಗೆ ಬಂದ ನಂತರ ಯಶ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಾನು ಈ ಬಗ್ಗೆ ಲೈವ್ ಆಗಿ ಮಾತನಾಡುತ್ತೇನೆ ಎಂದು ಯಶ್ ಹೇಳಿದ್ದಾರೆ. ಜೂನ್ 27 ರಂದು ಸಿಸಿಬಿ ಪೊಲೀಸರು ಶೂಟೌಟ್ ಮಾಡಿ ರೌಡಿ ಸೈಕಲ್ ರವಿಯನ್ನು ಬಂಧಿಸಿದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago