ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ , ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ  : ಶ್ರೀರಾಮುಲು – vishwanews24

Featured, ರಾಜ್ಯ ನ್ಯೂಸ್

ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ , ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ  : ಶ್ರೀರಾಮುಲು

ಬಳ್ಳಾರಿ: ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ. ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಹೈಕಮಾಂಡ್ ನಾಯಕರ ಮುಂದೆ ಕೇಳಿಕೊಳ್ಳುತ್ತೇನೆ. ಹೈಕಮಾಂಡ್ ಇಟ್ಟ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ಪಕ್ಷದ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ಮಾಜಿ ಸಚಿವ ಶ್ರೀರಾಮುಲು ಇಂದು ಪಕ್ಷದ ಮೇಲೆ ಸಾಫ್ಟ್ ಕಾರ್ನರ್ ತೋರಿಸಿದ್ದಾರೆ.
ಅಸಮಾಧಾನದ ಕುರಿತು ಬಳ್ಳಾರಿಯ ಮನೆಯಲ್ಲಿ ಶುಕ್ರವಾರ (ಜ.24) ಮಾತನಾಡಿದ ಶ್ರೀರಾಮುಲು, ಗುರುವಾರ ಜೆಪಿ ನಡ್ಡಾ ಅವರು ದೂರವಾಣಿ ಮೂಲಕ ಮಾತಾಡಿದರು. ಏನಾಗಿದೆ ಎನ್ನುವ ಮಾಹಿತಿ ಎಲ್ಲವನ್ನೂ ವಿವರಿಸಿದ್ದೇನೆ. ಕೋರ್ ಕಮಿಟಿಯಲ್ಲಿ ರಾಧಾಮೋಹನ್ ಅಗರವಾಲ್ ನಡೆದುಕೊಂಡ ಬಗ್ಗೆಯೂ ಹೇಳಿದ್ದೇನೆ. ರಾಮುಲು ನಿನ್ನ ಪರವಾಗಿ ನಾನಿದ್ದೇನೆ, ಯಾವುದೇ ಯೋಚನೆ ಮಾಡಬೇಡಿ. ಮುಂದೆ ದೆಹಲಿಗೆ ಬರುವುದಾಗಿದ್ದರೆ ಬನ್ನಿ ಎಂದು ನಡ್ಡಾ ಹೇಳಿದ್ದಾರೆ. ನಾನು ಸಹಾಯಕರಿಂದ ಅಪಾಯಿಟ್ಮೆಂಟ್ ತಗೊಂಡು ಬರುತ್ತೇನೆ ಎಂದು ಹೇಳಿದ್ದೇನೆ‌ ಎಂದರು.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ  ಕಾರು :  ಮೂವರು ಸಾವು – vishwanews24

ರಾಜಕಾರಣದಲ್ಲಿ ಕ್ರೆಡಿಬಿಲಿಟಿ ಬಹಳ ಮುಖ್ಯ. ಅದನ್ನು ನಾವು ಕಳೆದುಕೊಳ್ಳಬಾರದು. ಸ್ವಾಭಿಮಾನಕ್ಕೆ ತೊಂದರೆಯಾಗಿದ್ದರಿಂದ ನಾನು ಮಾತನಾಡಿದೆ. ಇದೀಗ ನನಗೆ ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಅವರಿಟ್ಟಂತ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ. ಒಂದು ದಿನ ನಿಗದಿ ಮಾಡಿಕೊಂಡು ದೆಹಲಿಗೆ ಹೋಗುತ್ತೇನೆ. ಕಷ್ಟಕ್ಕೆ ಕೂಲಿ ಕೊಡಿ, ಅಗೌರವ ಮಾಡಬೇಡಿ, ಅಪಮಾನ ಮಾಡಬೇಡಿ, ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಕೇಳಿದ್ದೇನೆ, ಇದನ್ನೇ ನಾಯಕರ ಮುಂದೆಯೂ ಹೇಳುತ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ.

Leave a Reply