ಬಳ್ಳಾರಿ: ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ. ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಹೈಕಮಾಂಡ್ ನಾಯಕರ ಮುಂದೆ ಕೇಳಿಕೊಳ್ಳುತ್ತೇನೆ. ಹೈಕಮಾಂಡ್ ಇಟ್ಟ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ಪಕ್ಷದ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ಮಾಜಿ ಸಚಿವ ಶ್ರೀರಾಮುಲು ಇಂದು ಪಕ್ಷದ ಮೇಲೆ ಸಾಫ್ಟ್ ಕಾರ್ನರ್ ತೋರಿಸಿದ್ದಾರೆ.
ಅಸಮಾಧಾನದ ಕುರಿತು ಬಳ್ಳಾರಿಯ ಮನೆಯಲ್ಲಿ ಶುಕ್ರವಾರ (ಜ.24) ಮಾತನಾಡಿದ ಶ್ರೀರಾಮುಲು, ಗುರುವಾರ ಜೆಪಿ ನಡ್ಡಾ ಅವರು ದೂರವಾಣಿ ಮೂಲಕ ಮಾತಾಡಿದರು. ಏನಾಗಿದೆ ಎನ್ನುವ ಮಾಹಿತಿ ಎಲ್ಲವನ್ನೂ ವಿವರಿಸಿದ್ದೇನೆ. ಕೋರ್ ಕಮಿಟಿಯಲ್ಲಿ ರಾಧಾಮೋಹನ್ ಅಗರವಾಲ್ ನಡೆದುಕೊಂಡ ಬಗ್ಗೆಯೂ ಹೇಳಿದ್ದೇನೆ. ರಾಮುಲು ನಿನ್ನ ಪರವಾಗಿ ನಾನಿದ್ದೇನೆ, ಯಾವುದೇ ಯೋಚನೆ ಮಾಡಬೇಡಿ. ಮುಂದೆ ದೆಹಲಿಗೆ ಬರುವುದಾಗಿದ್ದರೆ ಬನ್ನಿ ಎಂದು ನಡ್ಡಾ ಹೇಳಿದ್ದಾರೆ. ನಾನು ಸಹಾಯಕರಿಂದ ಅಪಾಯಿಟ್ಮೆಂಟ್ ತಗೊಂಡು ಬರುತ್ತೇನೆ ಎಂದು ಹೇಳಿದ್ದೇನೆ ಎಂದರು.
ರಾಜಕಾರಣದಲ್ಲಿ ಕ್ರೆಡಿಬಿಲಿಟಿ ಬಹಳ ಮುಖ್ಯ. ಅದನ್ನು ನಾವು ಕಳೆದುಕೊಳ್ಳಬಾರದು. ಸ್ವಾಭಿಮಾನಕ್ಕೆ ತೊಂದರೆಯಾಗಿದ್ದರಿಂದ ನಾನು ಮಾತನಾಡಿದೆ. ಇದೀಗ ನನಗೆ ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಅವರಿಟ್ಟಂತ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ. ಒಂದು ದಿನ ನಿಗದಿ ಮಾಡಿಕೊಂಡು ದೆಹಲಿಗೆ ಹೋಗುತ್ತೇನೆ. ಕಷ್ಟಕ್ಕೆ ಕೂಲಿ ಕೊಡಿ, ಅಗೌರವ ಮಾಡಬೇಡಿ, ಅಪಮಾನ ಮಾಡಬೇಡಿ, ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಕೇಳಿದ್ದೇನೆ, ಇದನ್ನೇ ನಾಯಕರ ಮುಂದೆಯೂ ಹೇಳುತ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…