ಮೈಸೂರು: ‘ರಾಜಕಾರಣದ ಚಕ್ರವನ್ನು ಹೇಗೆ ತಿರುಗಿಸಬೇಕೆಂಬುದು ನನಗೂ ಗೊತ್ತಿದೆ. ಅಂಥ ಸಮಯ ಬರಲಿದ್ದು, ಆಗ ಚಕ್ರ ತಿರುಗಿಸೋಣ. ಯಾರೂ ಶಾಶ್ವತ ಅಲ್ಲ’ ಎಂದು ಶಾಸಕ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಗುರುವಾರ ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಉದ್ದೇಶಿಸಿ ಮಾರ್ಮಿಕವಾಗಿ ನುಡಿದರು.
ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ನನ್ನ ಕ್ಷೇತ್ರಕ್ಕೆ ಸಿಗಬೇಕಿದ್ದ ವೈದ್ಯಕೀಯ ಕಾಲೇಜನ್ನೇ ಕಿತ್ತುಕೊಂಡಿದ್ದಾರೆ. ಇನ್ನು ಇತರ ಶಾಸಕರ ಅನುದಾನ ಕಿತ್ತುಕೊಂಡಿರುವುದು ಯಾವ ಲೆಕ್ಕ?’ ಎಂದರು.
‘ಹಲವರನ್ನು ಬೆಳೆಸಿದ್ದೇನೆ, ಎಷ್ಟೋ ಮಂದಿಗೆ ಅಧಿಕಾರ ಕೊಟ್ಟಿದ್ದೇನೆ. ಆದರೆ, ಜಾತಿ ವ್ಯಾಮೋಹ, ಹಣಕ್ಕೆ ಮಾರಿಕೊಂಡಿಲ್ಲ. ಹಾಗೇನಾದರೂ ಇದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ನನ್ನ ಸ್ಟೈಲೇ ಬೇರೆ, ವಿಚಾರವೇ ಬೇರೆ. ಡಿಕೆಶಿ ಕರ್ನಾಟಕದ ಆಸ್ತಿ’ ಎಂದು ಹೇಳಿದರು.
ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮೈಸೂರಿಗೆ ಬಂದಿಳಿದ ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿಯಿಂದ ಸ್ವಾಗತಿಸಿದರು.
ರೈಲು ನಿಲ್ದಾಣದಿಂದ ಕಾಂಗ್ರೆಸ್ ಭವನದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ, ಕ್ರೇನ್ ನೆರವಿನಿಂದ ಸೇಬಿನ ಹಾರ ಹಾಕಿದರು. ಜೆಡಿಎಸ್ ಕಾರ್ಯಕರ್ತರೂ ಇದ್ದರು. ವೇದಿಕೆ ಕಾರ್ಯಕ್ರಮದ ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…