ಬೆಳಗಾವಿ:ಬೆಳಗಾವಿಯ ಕೆಎಂಎಫ್ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಮರ್ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದು, ಸಹೋದರ ಬಾಲಚಂದ್ರ ಜಾರಕಿಹೊಳಿ ನೆರವಿನಿಂದ ರಮೇಶ್ ಜಾರಕಿಹೊಳಿ, ಪುತ್ರನನ್ನು ರಾಜಕೀಯಕ್ಕೆ ಕರೆ ತಂದಿದ್ದಾರೆ.
ಗೋಕಾಕ್ ಸಾಹುಕಾರ ರೆಬೆಲ್ ಶಾಸಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರ್ ಜಾರಕಿಹೊಳಿಯ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜಾಗುತ್ತಿದೆ.
ಬೆಳಗಾವಿ ಕೆಎಂಎಫಗೆ ಅಮರ್ ಜಾರಕಿಹೊಳಿ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಇದೇ ತಿಂಗಳ 28 ರಂದು ನಡೆಯಲಿರುವ ಕೆಎಂಎಫ ನಿರ್ದೇಶಕರ ಚುನಾವಣೆಯಲ್ಲಿ ಒಟ್ಟು 14 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದ್ದು, ಆದರೆ ಇದೀಗ 7 ಸ್ಥಾನಗಳು ನಿರ್ದೇಶಕ ಹುದ್ದೆಗೆ ಅವಿರೋಧ ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹಿಡಿತದಲ್ಲಿ ಇರುವ ಕೆಎಂಎಫ. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಕೆಎಂಎಫ ಮತ್ತು ಡಿಸಿಸಿ ಬ್ಯಾಂಕ್ ಪ್ರಮುಖ ಪಾತ್ರವಹಿಸುತ್ತದೆ. ಇನ್ನೂ ಚಿಕ್ಕಪ್ಪ ಬಾಲಚಂದ್ರ ಜಾರಕಿಹೊಳಿಯಿಂದ ಅಮರ್ ಕೆಎಂಎಫ ಎಂಟ್ರಿಯಾಗಿದ್ದಾರೆ.
ಏಪ್ರಿಲ್ 21ರಂದು ಏಳು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅಮರ್ ಜಾರಕಿಹೊಳಿ ಸೇರಿದಂತೆ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದ 7 ನಿರ್ದೇಶಕ ಸ್ಥಾನಗಳಿಗೆ ಏಪ್ರಿಲ್ 28ರಂದು ಚುನಾವಣೆ ನಡೆಯಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…