ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿ.ಎಸ್. ಯಡಿಯೂರಪ್ಪ ಆಕಸ್ಮಿಕವಾಗಿ ಭೇಟಿಯಾದರು. ಈ ಸಂದರ್ಭದಲ್ಲಿ ಕೈಕುಲುಕಿ ಆತ್ಮೀಯವಾಗಿ ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ.
ಬೆಳಗಾವಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿದ್ದಾರೆ. ಇನ್ನು ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕೂಡಾ ಅದೇ ವಿಮಾನದಲ್ಲಿ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಉಭಯ ನಾಯಕರು ಪರಸ್ಪರ ಮಾತನಾಡಿ, ಕುಶಲೋಪರಿ ವಿಚಾರಿಸಿದರು.
ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು. ಇಲ್ಲಿ ಅಧಿಕಾರ, ಅಂತಸ್ತು ಯಾವುದೂ ಶಾಶ್ವತವಲ್ಲ, ಕೊನೆಗೊಂದು ದಿನ ಗೆಲ್ಲುವುದು ನಮ್ಮ ನಡುವಿನ ಮಾನವೀಯ ಸಂಬಂಧಗಳು ಮಾತ್ರ. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಮಾಜಿ ಮುಖ್ಯಮಂತ್ರಿ @BSYBJP ಅವರನ್ನು ಭೇಟಿಯಾದ ಕ್ಷಣ ಎಂದು ತಮ್ಮ ಭೇಟಿಯ ಫೋಟೋವನ್ನು ಟ್ವಿಟ್ಟರ್ ಮೂಲಕ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…