ಬೆಂಗಳೂರು: “ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಈಡಿ ಸಂಸ್ಥೆ ನೋಟಿಸ್ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, “ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆ ಈಗಾಗಲೇ ತನಿಖೆ ಮಾಡುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ನಂತರ ನಾನು ಮಾತನಾಡುತ್ತೇನೆ” ಎಂದು ತಿಳಿಸಿದರು.
ಮುಡಾ ಪ್ರಕರಣ ಸಿಬಿಐ ತನಿಖೆ ನೀಡಬೇಕು ಎಂಬ ವಿಚಾರವಾಗಿ ಕೇಳಿದಾಗ, “ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ಒಟ್ಟಿಗೆ ತನಿಖೆ ಮಾಡುವಂತಿಲ್ಲ ಎಂದು ತಿಳಿಸಿದರು.
ಸಿಎಂ ಹುದ್ದೆ ವಿಚಾರವಾಗಿ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, “ಆ ರೀತಿಯಾಗಿ ಯಾರೂ ಏನೂ ಮಾತನಾಡಿಲ್ಲ. ಸರ್ಕಾರ ಸುಭದ್ರವಾಗಿದೆ. ನಾವೆಲ್ಲರೂ ಸಿಎಂ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…