Featured

ರಾಜಕೀಯ ಪ್ರೇರಿತ ಹಿಜಾಬ್ ವಿವಾದದ ವಿದ್ಯಾರ್ಥಿನಿಯರ ಮುಖವಾಡ ಬಯಲು : ಯಶ್ ಪಾಲ್ ಸುವರ್ಣ – Vishwanews24

ರಾಜಕೀಯ ಪ್ರೇರಿತ ಹಿಜಾಬ್ ವಿವಾದದ ವಿದ್ಯಾರ್ಥಿನಿಯರ ಮುಖವಾಡ ಬಯಲು : ಯಶ್ ಪಾಲ್ ಸುವರ್ಣ – Vishwanews24

ಹಿಜಾಬ್ ವಿವಾದದ ಮೂಲಕ ದೇಶದಾದ್ಯಂತ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಹಾಳುಗೆಡವಲು ಯತ್ನಿಸುತ್ತಿರುವ ಮತೀಯವಾದಿಗಳ ರಾಜಕೀಯ ಮುಖವಾಡ ಇದೀಗ ಬಯಲಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ಅರ್ಜಿ ಸಲ್ಲಿಸಿ ಹಿಜಾಬ್ ಧರಿಸಲು ಅವಕಾಶ ಕೋರಿ ಶೀಘ್ರ ತೀರ್ಪು ನೀಡುವಂತೆ ಮನವಿ ಮಾಡಿದ್ದ ವಿದ್ಯಾರ್ಥಿನಿಯರು ಇದೀಗ ಉತ್ತರ ಪ್ರದೇಶ ಸಹಿತ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೆ ವಿಚಾರಣೆ ನಡೆಸದಂತೆ ಹೈಕೋರ್ಟ್  ಮಧ್ಯಂತರ ಅರ್ಜಿ ಸಲ್ಲಿಸುವ ಮೂಲಕ ತಮ್ಮ ಹೋರಾಟ ರಾಜಕೀಯ ಪ್ರೇರಿತ ಎಂಬುದನ್ನು ಸಾಬೀತುಪಡಿಸಿದ್ದಾರೆ.
ಸಿಎಫ್ಐ ಹಾಗೂ ಎಸ್ ಡಿ ಪಿ ಐ ಪಕ್ಷದ ಕೈಗೊಂಬೆಗಳಾಗಿ ಮುಗ್ಧ ವಿದ್ಯಾರ್ಥಿಗಳೆಂಬ ಮುಖವಾಡ ಧರಿಸಿ ಹಿಜಾಬ್ ವಿವಾದ ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ, ದೇಶದ ಕೋಟ್ಯಾಂತರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೊಳ್ಳಿಯಿಡಲು ಮುಂದಾಗಿದ್ದಾರೆ.
ಇನ್ನೂ ಮತದಾನದ ಹಕ್ಕು ಹೊಂದಿಲ್ಲದ ವಿದ್ಯಾರ್ಥಿನಿಯರು ಚುನಾವಣೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲು ಯತ್ನಿಸುವ ಮೂಲಕ ತಮ್ಮ ರಾಜಕೀಯ ಪ್ರೇರಿತ  ಹಿಜಾಬ್ ವಿವಾದದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನದಲ್ಲಿ ತೊಡಗಿದ್ದಾರೆ.
ದೇಶದ ಮುಸ್ಲಿಂ ಮಹಿಳೆಯರ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವ ದುರುದ್ದೇಶದಿಂದ ಹಿಜಾಬ್ ವಿವಾದದ ಮೂಲಕ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿತರಾಗಿ ಮನೆಯಲ್ಲಿ ಗುಲಾಮರನ್ನಾಗಿಸುವ ಷಡ್ಯಂತ್ರದ ಭಾಗವಾಗಿದ್ದು, ಈಗಾಗಲೇ ವಿದ್ಯಾವಂತ ಮುಸ್ಲಿಂ ಮಹಿಳೆಯರು
ರಾಷ್ಟ್ರೀಯವಾದಿ ಚಿಂತನೆಯೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡು ಸ್ವಾವಲಂಬಿಯಾಗಿರುವುದು ಮತೀಯವಾದಿಗಳಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದು,  ಪಂಚ ರಾಜ್ಯಗಳ ಚುನಾವಣೆ ಮೇಲೆ ಬೀರಲಿರುವ ವ್ಯತಿರಿಕ್ತ ಪರಿಣಾಮ ಕಂಗೆಡಿಸಿದೆ.
ಈ ಮೂಲಕ ಈ ಮತೀಯವಾದಿ ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆಗೆ ಬೆಂಗಾವಲಾಗಿ ನಿಂತಿರುವ ಸಿ ಎಫ್ ಐ, ಎಸ್ ಡಿ ಪಿ ಐ ಪಕ್ಷದ ರಾಜಕೀಯ ಷಡ್ಯಂತ್ರ ಬಯಲಾಗಿದ್ದು, ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ಪರಿಣಮಿಸಿರುವ ಅಂತಾರಾಷ್ಟ್ರೀಯ ಮಟ್ಟದ ಹುನ್ನಾರದ ಹಿಜಾಬ್ ವಿವಾದದಲ್ಲಿ ರಾಷ್ಟ್ರ ವಿರೋಧಿಗಳೊಂದಿಗೆ ಕೈ ಜೋಡಿಸಿರುವ ವಿದ್ಯಾರ್ಥಿನಿಯರ  ನಡೆಗೆ ದೇಶದ ಪ್ರಜ್ಞಾವಂತ ನಾಗರಿಕರು ತಕ್ಕ ಉತ್ತರ ನೀಡಲಿದ್ದು, ಈ ರಾಷ್ಟ್ರ ವಿರೋಧಿ ಮತೀಯವಾದಿಗಳ ವಿರುದ್ಧ ನಿರಂತರ ಹೋರಾಟ ರೂಪಿಸಲು ಬದ್ದ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

7 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago