ಬೆಂಗಳೂರು: ಹಜ್ ಭವನಕ್ಕೆ ಟಿಪ್ಪು ಹೆಸರಿಡಲು ನಾನು ಸೂಚಿಸಿಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ. ಜಮೀರ್ ಅಹಮ್ಮದ್ ಮತ್ತು ಖಾದರ್ ಅವರ ನೇತೃತ್ವದಲ್ಲಿ ಜೆಡಿಎಸ್ ಶಾಸಕರನ್ನು ಒಳಗೊಂಡಂತೆ ಅಲ್ಪಸಂಖ್ಯಾತರ ನಾಯಕರ ಸಭೆ ನಡೆಯಿತು. ಬಳಿಕ ಮಾತಾಡಿದ ಸಚಿವ ಜಮೀರ್ ಅಹಮ್ಮದ್ ಅವರು, ಮುಖ್ಯ ಮಂತ್ರಿಗಳು ಹೊಸ ಬಜೆಟ್ ಮಂಡನೆ ಮಾಡ್ತಿದ್ದಾರೆ. ಹೀಗಾಗಿ ಬಜೆಟ್ನಲ್ಲಿ ನಮ್ಮ ಇಲಾಖೆ ಮತ್ತು ವಕ್ಫ್ ಬೋರ್ಡ್ ಗೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ಇದೆ ವೇಳೆ ರೈತರ ಸಾಲ ಮನ್ನಾ ಕುರಿತು ಪ್ರತಿಕ್ರಿಯಿಸಿದ ಜಮೀರ್ ಅವರು, ಸಿಎಂ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಲು ನಿರ್ಧರಿಸಿದ್ದಾರೆ. ಎಷ್ಟು ಮನ್ನಾ ಮಾಡಲಿದ್ದಾರೆ ಎಂದು ಗೊತ್ತಿಲ್ಲ. ಆದರೆ ನಮ್ಮ ಬೇಡಿಕೆ ಕೂಡಾ ಈಡೇರಿಸುತ್ತಾರೆ ಅನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಹಜ್ ಭವನಕ್ಕೆ ಟಿಪ್ಪು ಹೆಸರಿಡಲು ನಾನು ಹೇಳಿಲ್ಲ. ಜನರಿಂದ ಮನವಿ ಬಂದಿದೆ ಅಂತಷ್ಟೇ ಹೇಳಿದ್ದೆ. ಆದರೆ ಇದರ ಕುರಿತಾಗಿ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆ ಮಾಡಲಾಯಿತು. ಯಡಿಯೂರಪ್ಪ ಅಬ್ದುಲ್ ಕಲಾಂ ಹೆಸರಿಡಲು ಹೇಳಿದ್ದಾರೆ. ಅವರ ಸಲಹೆಯನ್ನು ನಾನು ಸ್ವೀಕಾರ ಮಾಡುತ್ತೇನೆ. ಅಂತಿಮವಾಗಿ ಯಾರ ಹೆಸರಿಡಬೇಕು ಅನ್ನುವುದರ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ತೇವೆ ಎಂದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]